ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಒಂದು ಮೂರುತಿಯಲ್ಲಿ ಹರಿಹರ | ಹಯವದನ | Ondu Murutiyalli Hari Hara | Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)



ಒಂದು ಮೂರುತಿಯಲ್ಲಿ ಹರಿಹರದೇವರಿಬ್ಬರು 
ಬಂದು ನೆಲೆಗೊಂಡುದನ ಕಂಡೆನದ್ಭುತವ ||ಪ||

ಭಾವಜನ ಪಿತನೊಬ್ಬ ಅವನ ಕೊಂದವನೊಬ್ಬ
ಹಾವ ತುಳಿದವನೊಬ್ಬ ಧರಿಸಿದವನೊಬ್ಬ
ಗೋವಾ ಕಾಯಿದನೊಬ್ಬ ಅದನೇರಿದವನೊಬ್ಬ
ಭಾವಿಸಲು ವಿಪರೀತಚರಿತರಂತಿರ್ದು ||೧||

ಬಾಣನ ಗೆಲಿದವನೊಬ್ಬ ಬಾಗಿಲ ಕಾಯಿದವನೊಬ್ಬ
ದಾನವರ ರಿಪುವೊಬ್ಬ ವರವೀವನೊಬ್ಬ
ಏನನೆಂಬೆನೊ ಜಗವ ಕಾವುತಿಹನೊಬ್ಬ ನಿ -
ಧಾನಿಸಲು ಸಂಹರಿಸಿ ಕೊಲ್ಲುತಿಪ್ಪನೊಬ್ಬ ||೨||

ಯಾಗಪಾಲಕನೊಬ್ಬ ಯಾಗಭಂಜನನೊಬ್ಬ
ನಾಗರಕ್ಷಕನೊಬ್ಬ ನಾಗಶಿಕ್ಷಕನು ಒಬ್ಬ
ಈಗ ನಲ್ಲಳಿಗರ್ಧದೇಹವನಿತ್ತ ಶಿವನಂತೆ
ಭೋಗದೊಳು ಹೊಂದಿಹ ಹಯವದನ ಬಲ್ಲ ||೩||

oamdu muruthiyalli hariharadevaribbaru 
bamdu nelegomDudana kamDenadbhuthava ||p|| 

bhaavajana pithanobba avana komdavanobba 
haava thuLidavanobba dharisidavanobba 
govaa kaayidanobba adaneridavanobba 
bhaavisalu viparithacharitharamthirdu ||೧|| 

baaNana gelidavanobba baagila kaayidavanobba 
daanavara ripuvobba varavivanobba 
enanembeno jagava kaavuthihanobba ni - 
dhaanisalu samharisi kolluthippanobba ||೨|| 

yaagapaalakanobba yaagabhamjananobba 
naagarakshhakanobba naagashikshhakanu obba 
iga nallaLigardhadehavaniththa shivanamthe 
bhogadoLu homdiha hayavadana balla ||೩||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru