ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಅಂಗಿ ತೊಟ್ಟೇನೆ ಗೋಪಿ ಶೃಂಗಾರವಾದೇನೆ | ಪುರಂದರ ವಿಠಲ | Angi Tottene Gopi | Purandara Vithala


ಸಾಹಿತ್ಯ : ಶ್ರೀ ಪುರಂದರ  ದಾಸರು (ಪುರಂದರ ವಿಠಲ ಅಂಕಿತ)
Kruti: Sri Purandara dasaru (Purandara vittala)


ಅಂಗಿ ತೊಟ್ಟೇನೆ ಗೋಪಿ ಶೃಂಗಾರವಾದೇನೆ | ಪ ||
ಹಾಲ ಕುಡಿದೇನೆ ಗೋಪಿ ಆಕಳ ಕಾಯ್ದೇನೆ || ಅಪ ||

ಚಕ್ಕುಲಿ ಕೊಡು ಎನಗೆ ಗೋಪಿ ಅಕ್ಕರದಿ ಬಂದೆನೆ 
ಗೊಲ್ಲರ ಮಕ್ಕಳ ಎಲ್ಲರೊಡಗೂಡಿ ಹಲವು ಗೋವ್ಗಳ ಕಾಯ್ದು ಬಂದೆನೆ || ೧ ||

ಅಮ್ಮಣ್ಣಿ ಕೊಡು ಎನಗೆ ಗೋಪಿ ಬೆಣ್ಣೆಯ ತೋರೆ ಮೇಲೆ
ಗಮ್ಮನೆ ತಟಕನೆ ಮೊಸರನೆ ಸವಿದು ಸುಮ್ಮನೆ ತೊಟ್ಟಿಲೊಳು ಲೋಲಾಡುವೆನು || ೨ ||

ಅಪ್ಪಚ್ಚಿ ಕೊಡು ಎನಗೆ ಗೋಪಿ ತುಪ್ಪವ ಕೊಡೆ ಮೇಲೆ
ಅಪ್ಪಗೆ ಹೇಳಿ ಟೊಪ್ಪಿಗೆ ಕೊಡಿಸೆ ಉಪ್ಪು ಕಡಲೆಯನ್ನು ಚೀಲದಿ ತುಂಬುವ || ೩ ||

ಚೆಂಡು ಕೊಡು ಎನಗೆ ಗೋಪಿ ಚಿನಿಕೋಲು ಬೇಕಲ್ಲ 
ಗುಂಡುಕಲ್ಲಿನಂಥ ಬುತ್ತಿಯ ಕಟ್ಟಿ ಹಿಂಡು ಗೋವುಗಳ ಕಾಯ್ದು ಬಂದೆನೆ || ೪ ||

ಈ ಲೀಲೆಗಳ ಕೇಳಿ ಗೊಪಿ ತೋಳಿನೊಳ್ ಬಿಗಿದಪ್ಪಿ
ಶ್ರೀಲೋಲ ಪುರಂದರ ವಿಠಲ ಲೀಲೆಯಿಂದ ಬಾರೆನುತ || ೫ ||

aMgi toTTEne gOpi shRuMgaaravaadEne | pa ||
haala kuDidEne gOpi AkaLa kaaydEne || apa ||

cakkuli koDu enage gOpi akkaradi baMdene 
gollara makkaLa ellaroDagUDi halavu gOvgaLa kaaydu baMdene || 1 ||

ammaNNi koDu enage gOpi beNNeya tOre mEle
gammane taTakane mosarane savidu summane toTTiloLu lOlaaDuvenu || 2 ||

appacci koDu enage gOpi tuppava koDe mEle
appage hELi Toppige koDise uppu kaDaleyannu cIladi tuMbuva || 3 ||

ceMDu koDu enage gOpi cinikOlu bEkalla 
guMDukallinaMtha buttiya kaTTi hiMDu gOvugaLa kaaydu baMdene || 4 ||

I lIlegaLa kELi gopi tOLinoL bigidappi
shrIlOla puraMdara viThala lIleyiMda baarenuta || 5 ||
 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru