ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಅಪಮೃತ್ಯು ಪರಿಹರಿಸೋ ಅನಿಲದೇವಾ | ಜಗನ್ನಾಥವಿಠಲ | Apamrutyu parihariso | Jagannatha Vithala


ಸಾಹಿತ್ಯ : ಶ್ರೀ ಜಗನ್ನಾಥ ದಾಸರು 
Kruti: Sri Jagannatha Dasaru 


ಅಪಮೃತ್ಯು ಪರಿಹರಿಸೋ ಅನಿಲದೇವಾ ||ಪ|| 
ಕೃಪಣವತ್ಸಲನೆ ಕಾವರ ಕಾಣೆ ಜಗದೊಳಗೆ ||ಅ.ಪ|| 
 
ನಿನಗಿನ್ನು ಸಮರಾದ ಅನಿಮಿತ್ತ ಬಾಂಧವರು ಎನಗಿಲ್ಲ ಆವಾವ ಜನುಮದಲ್ಲಿ 
ಅನುದಿನವು ಎಮ್ಮನೂದಾಸೀನ ಮಾಡುವುದು ಅನುಚಿತವು ಜಗದಿ ಸಜ್ಜನ ಶಿಖಾಮಣಿಯೇ ||೧|| 
 
ಜ್ಞಾನಾಯುರೂಪಕನು ನೀನಹುದು ವಾಣಿ ಪಂಚಾನನಾಧ್ಯಮರರಿಗೆ ಪ್ರಾಣದೇವ
ದೀನವತ್ಸಲನೆಂದು ನಾ ನಿನ್ನ ಮೊರೆಹೊಕ್ಕೆ ದಾನವಾರಣ್ಯ ಕೃಶಾನು ಸರ್ವದಯೆನ್ನ ||೨|| 
 
ಸಾಧನ ಶರೀರವಿದು ನೀ ದಯದಿ ಕೊಟ್ಟದ್ದು ಸಾಧಾರಣವಲ್ಲ ಸಾಧು ಪ್ರಿಯನೆ 
ವೇದವಾದೋದಿತ ಜಗನ್ನಾಥ ವಿಠಲನ ಪಾದ ಭಜನೆಯನಿತ್ತು ಮೋದ ಕೊಡು ಸತತ ||೩||

apamRutyu pariharisO aniladEvA ||pa|| 
kRupaNavatsalane kAvara kANe jagadoLage ||a.p|| 
 
ninaginnu samarAda animitta bAMdhavaru enagilla AvAva janumadalli 
anudinavu emmanUdAsIna mADuvudu anucitavu jagadi sajjana SiKAmaNiyE ||1|| 
 
JnaanAyurUpakanu nInahudu vANi paMcAnanAdhyamararige prANadEva
dInavatsalaneMdu nA ninna morehokke dAnavAraNya kRuSAnu sarvadayenna ||2|| 
 
sAdhana SarIravidu nI dayadi koTTaddu sAdhAraNavalla sAdhu priyane 
vEdavAdOdita jagannAtha viThalana pAda bhajaneyaniththu mOda koDu satata ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru