ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆವ ರೋಗವು ಎನಗೆ | ಗೋಪಾಲ ವಿಠಲ | Ava Rogavu Enage Deva Dhanvantri | Gopala Vithala


ಸಾಹಿತ್ಯ : ಗೋಪಾಲ ದಾಸರು
Kruti: Gopala Dasaru 


ಆವ ರೋಗವು ಎನಗೆ ದೇವ ಧನ್ವಂತ್ರಿ| 
ಸಾವಧಾನದಿ ಎನ್ನ ಕೈ ಪಿಡಿದು ನೋಡಯ್ಯ |ಪ| 
 
ಹರಿಮೂರ್ತಿಗಳು ಎನ್ನ ಕಂಗಳಿಗೆ ಕಾಣಿಸವು| 
ಹರಿ ಕೀರ್ತನೆಯು ಕೇಳಿಸದು ಕಿವಿಗೆ| 
ಹರಿ ಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆ| 
ಹರಿ ಪ್ರಸಾದ ಜಿಹ್ವೆಗೆ ಸವಿಯಾಗದಯ್ಯ |೧| 
 
ಹರಿಪಾದ ಸೇವೆಗೆನ್ನ ಹಸ್ತಗಳು ಚಲಿಸವು| 
ಗುರುಹಿರಿಯರಂಘ್ರಿಗೆ ಶಿರ ಬಾಗದು| 
ಹರಿಯ ನಿರ್ಮಾಲ್ಯವಾ ಘ್ರಾಣಿಸದು ನಾಸಿಕವು| 
ಹರಿಯಾತ್ರೆಗಳಿಗೆನ್ನ ಕಾಲೇಳವಯ್ಯಾ |೨| 
 
ಅನಾಥ ಬಂಧು ಗೋಪಾಲ ವಿಠಲರೇಯ| 
ಎನ್ನ ಭಾಗದ ವೈದ್ಯ ನೀನೆಯಾದಿ| 
ಅನಾದಿ ಕಾಲದ ಭವ ರೋಗ ಕಳೆಯಯ್ಯಾ| 
ನಾನೆಂದಿಗು ಮರೆಯೆ ನೀ ಮಡಿದುಪಕಾರ |೩| 

Ava rOgavu enage dEva dhanvaMtri| 
sAvadhAnadi enna kai piDidu nODayya |pa| 
 
harimUrtigaLu enna kaMgaLige kANisavu| 
hari kIrtaneyu kELisadu kivige| 
hari maMtra stOtra bAradu enna nAligege| 
hari prasAda jihvege saviyAgadayya |1| 
 
haripAda sEvegenna hastagaLu calisavu| 
guruhiriyaraMGrige Sira bAgadu| 
hariya nirmAlyavA GrANisadu nAsikavu| 
hariyAtregaLigenna kAlELavayyA |2| 
 
anAtha baMdhu gOpAla viThalarEya| 
enna BAgada vaidya nIneyAdi| 
anAdi kAlada Bava rOga kaLeyayyA| 
nAneMdigu mareye nI maDidupakAra |3| 

 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru