ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕಾವುದೆಮ್ಮನು ಜಗವ ಕಾವ ಕರುಣಿಯೆ | ಹಯವದನ | Kavudemmanu Jagava | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಕಾವುದೆಮ್ಮನು ಜಗವ ಕಾವ ಕರುಣಿಯೆ ||ಪ||
ಈವುದೆಮಗೆ ಸಕಲಸುಖವ ದೇವ ಲಕುಮಿನಾರಾಯಣ ||ಅ. ಪ||

ಕಮಲಕರ್ಣಿಕಾ ಮಧ್ಯದಲ್ಲಿ ವಿಮಲ ವಿಹಂಗಪತಿಯ ಶಿರದಿ
ಕಮಲಭವನು ಬಿಡದೆ ಪೂಜಿಪ ಅಮರಕುಲ ಲಲಾಮ ವಿಭುವೆ ||೧||

ಮಧ್ವಮುನಿಯ ಕರಗಳೆಂಬೊ ಪದುಮಗಳಿಂದ ಪೂಜಿತ ಚರಣ
ಗೆದ್ದು ಕುಜನತತಿಯ ಸುಜನರುದ್ಧರಿಸುವ ಸುಗುಣನಿಧಿಯೆ ||೨||

ಶಂಖಚಕ್ರಗಧಾಪದುಮ ಅಂಕೆಗಳಿಂದ ಶೋಭಿತ ಕರ
ಪಂಕಜಾಕ್ಷ ಪಯೋಧಿಶಯನ ಶಂಕೆಯೆಲ್ಲದ ಹಯವದನ ||೩||

kaavudemmanu jagava kaava karuNiye ||p|| 
ivudemage sakalasukhava deva lakuminaaraayaNa ||a. p|| 

kamalakarNikaa madhyadalli vimala vihamgapathiya shiradi 
kamalabhavanu biDade pujipa amarakula lalaama vibhuve ||೧|| 

madhvamuniya karagaLembo padumagaLimda pujitha charaNa 
geddu kujanathathiya sujanaruddharisuva suguNanidhiye ||೨|| 

shamkhachakragadhaapaduma aamkegaLimda shobhitha kara 
pamkajaakshha payodhishayana shamkeyellada hayavadana ||೩||

Popular posts from this blog

ಹರಿಕಥಾಮೃತಸಾರ | ಪಿತೃಗಣ ಸಂಧಿ | ಜಗನ್ನಾಥವಿಠಲ | Pitrugana Sandhi | Jagannatha Dasaru | Harikathamruthasara

ಗೌರಿ ಆರತಿ ಹಾಡು | ಗೌರಿ ದೇವಿಗೆ ಸಖಿ | ಶ್ಯಾಮಸುಂದರ | Gouri Arati Song | Gouri Devige| Shyamasundara

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru