ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಂಬಿದೆ ನಿನ್ನ ಪಾದವ | ಪುರಂದರ ವಿಠಲ | Nambide Ninna Padava | Purandara Vithala


ಸಾಹಿತ್ಯ : ಶ್ರೀ ಪುರಂದರ  ದಾಸರು
Kruti: Sri Purandara dasaru 


ನಂಬಿದೆ ನಿನ್ನ ಪಾದವ ವೆಂಕಟರಮಣ ನಂಬಿದೆ ನಿನ್ನ ಪಾದವ || ಪ ||

ನಂಬಿದೆ ನಿನ್ನ ಪಾದಾಂಬುಜಯುಗಳವ ಚಂದದಿ ಸಲಹೋ ಮಂದರಧರನೆ || ಅಪ ||

ತಂದೆಯು ನೀನೆ ತಾಯಿಯು ನೀನೆ ಬಂಧು ಬಳಗವು ನೀನೆ |
ಬಂದ ದುರಿತವೆಲ್ಲ ಹೊಂದಿಕೊಳ್ಳದಂತೆ ಬಂದೆನ್ನ ಸಲಹೋ ಮುಕುಂದ ಮುರಾರಿ || ೧ ||

ಚಿಕ್ಕಂದು ಮೊದಲು ನಾನು ನಿನ್ನಯ ಪಾದ ಪೊಕ್ಕು ಜೀವಿಸುತಿಹೆನು |
ಘಕ್ಕನೆ ಜ್ಞಾನವ ಅಕ್ಕರೆಯಿಂದಲಿ ಕೊಡು ಮಕ್ಕಳ ಮಾಣಿಕ್ಯ ರುಕ್ಮಿಣೀ ಅರಸ || ೨ ||

ಮರೆತು ನಾ ಮಾಯೆಯೊಳು ಮುಳುಗಿದೆ ಮಾಯೆಯ ಅರಿತು ಅರಿಯದಾದೆ |
ಮರೆಯದೆ ಎನ್ನನು ಸಲಹೋ ಕೃಪಾನಿಧೇ ವರದ ಶ್ರೀ ವೆಂಕಟ ಪುರಂದರ ವಿಠಲ || ೩ ||

naMbide ninna paadava veMkaTaramaNa naMbide ninna paadava || pa ||

naMbide ninna paadaaMbujayugaLava caMdadi salahO maMdaradharane || apa ||

taMdeyu nIne taayiyu nIne baMdhu baLagavu nIne |
baMda duritavella hoMdikoLLadaMte baMdenna salahO mukuMda muraari || 1 ||

cikkaMdu modalu naanu ninnaya paada pokku jIvisutihenu |
Gakkane jnaanava akkareyiMdali koDu makkaLa maaNikya rukmiNI arasa || 2 ||

maretu naa maayeyoLu muLugide maayeya aritu ariyadaade |
mareyade ennanu salahO kRupaanidhE varada shrI veMkaTa puraMdara viThala || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru