ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಒಂದೇ ಮನದಿ ಭಜಿಸು ವಾಗ್ದೇವಿಯ | ಪುರಂದರವಿಠಲ | Onde Manadi Bhajisu | Purandara Vithala


ಸಾಹಿತ್ಯ : ಶ್ರೀ ಪುರಂದರ  ದಾಸರು
Kruti: Sri Purandara dasaru 


ಒಂದೇ ಮನದಿ ಭಜಿಸು ವಾಗ್ದೇವಿಯ 
ಇಂದುಮತಿ ಕೊಡುವಳು ಹರಿಯ ಧ್ಯಾನದಲ್ಲಿ || ಪ ||

ಹಿಂದೆ ಪ್ರಹ್ಲಾದನು ಕಮಲಜನ ಸತಿಗೆರಗಿ | ನಿಂದು ಆರಾಧಿಸಲು ಹರಿ ವಿಶ್ವಮಯನೆಂದು ||
ಬಂದ ವಿಘ್ನ ಕಳೆದು ಭಾವಶುದ್ಧಿಯನಿತ್ಯ | ಪೊಂದಿಸಿದಳಾಗ ಶ್ರೀ ಹರಿಯ ಚರಣವನು || ೧ ||

ಅಂದು ದಶಮುಖನನುಜ ವಂದಿಸದೆ ವಾಣಿಯನು | ಬಂದು ತಪವನು ಗೈಯೆ ಬಹುಕಾಲಕೆ ||
ಅಂದದಿಂದಜ ಮೆಚ್ಚಿ ವರವಧಿಕ ಬೇಡೆನಲು | ಬಂದು ಜಿಹ್ವೆಯಲಿ ನಿದ್ರೆಯನು ಬೇಡಿಸಲು || ೨ ||

ಅರಿತು ಭಜಿಸಲು ಬಿಡದೆ ಅಜನ ಅರಸಿಯ ನಿತ್ಯ | ಉರುತರವಾದ ವಾಕ್ ಶುದ್ಧಿಯನಿತ್ತು ||
ನಿರುತ ಶ್ರೀಪುರಂದರವಿಠಲನ ಸೇವೆಯೊಳು | ಪರತತ್ತ್ವದ ಕಥಾಮೃತವನುಣಿಸುವಳು | ೩ ||

oMdE manadi Bajisu vAgdEviya 
iMdumati koDuvaLu hariya dhyAnadalli || pa ||

hiMde prahlAdanu kamalajana satigeragi | niMdu ArAdhisalu hari viSvamayaneMdu ||
baMda viGna kaLedu BAvaSuddhiyanitya | poMdisidaLAga SrI hariya caraNavanu || 1 ||

aMdu daSamuKananuja vaMdisade vANiyanu | baMdu tapavanu gaiye bahukAlake ||
aMdadiMdaja mecci varavadhika bEDenalu | baMdu jihveyali nidreyanu bEDisalu || 2 ||

aritu Bajisalu biDade ajana arasiya nitya | urutaravAda vAk Suddhiyanittu ||
niruta SrIpuraMdaraviThalana sEveyoLu | paratattvada kathAmRutavanuNisuvaLu | 3 ||


Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru