ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರಾಮ ಎಂಬುವ ಎರಡು ಅಕ್ಷರದ ಮಹಿಮೆಯನು | ಪುರಂದರ ವಿಠಲ | Rama Embuva Eradu | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು
Kruti: Sri Purandara dasaru 


ರಾಮ ಎಂಬುವ ಎರಡು ಅಕ್ಷರದ ಮಹಿಮೆಯನು
ಪಾಮರರು ತಾವೇನು ಬಲ್ಲರಯ್ಯ ||ಅ. ಪ||

'ರಾ' ಎಂದ ಮಾತ್ರದೊಳು ರಕ್ತ ಮಾಂಸದೊಳಿದ್ದ |
ಆಯಸ್ತಿ ಗತವಾದ ಅತಿ ಪಾಪವನ್ನು||
ಮಾಯವನು ಮಾಡಿ ಮಹರಾಯ ಮುಕ್ತಿಯ ಕೊಡುವ|
ದಾಯವನು ವಾಲ್ಮೀಕಿ ಮುನಿರಾಯ ಬಲ್ಲ ||೧||

ರಾಮ....  ಶ್ರೀರಾಮ....ರಾಮ.... ರಘುರಾಮ.... 

ಮತ್ತೆ 'ಮಾ' ಎಂದೆನಲು ಹೊರ ಬಿದ್ದ ಪಾಪಗಳು|
ಒತ್ತಿ ಒಳಗೆ ಪೋಗದಂತೆ ಕವಾಟವಾಗಿ ||
ಚಿತ್ತ ಕಾಯಗಳ ಪವಿತ್ರ ಮಾಡುವ ಪರಿಯ|
ಭಕ್ತವರ ಹನುಮಂತನು ಓಬ್ಬ ತಾ ಬಲ್ಲ ||೨||

ರಾಮ....ರಾಮ.... ರಾಮ.... ಶ್ರೀರಾಮ....ಶ್ರೀರಾಮ....ಶ್ರೀರಾಮ....

ಧರೆಯೊಳೀ ನಾಮಕ್ಕೆ ಸರಿ ಮಿಗಿಲು ಇಲ್ಲೆಂದು|
ಪರಮ ವೇದಗಳೆಲ್ಲ ಪೊಗಳುತಿಹವು ||
ಸಿರಿಯರಸ ಪುರಂದರ ವಿಠಲನ ನಾಮವನು|
ಶಿವಕಾಶಿಯೊಳಗಿದ್ದ ಶಿವನು ತಾ ಬಲ್ಲ ||೩||

ಶ್ರೀ ರಾಮ ರಾಮ ರಾಮೇತಿ ರಮೇ ರಾಮೇ ಮನೋರಮೆ| 
ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೆ ||

raama eambuva eraDu akshharada mahimeyanu
paamararu thaavenu ballarayya ||a. p||

'raa' eamda maathradoLu raktha maamsadoLidda |
aayasthi gathavaada athi paapavannu||
maayavanu maaDi maharaaya mukthiya koDuv|
daayavanu vaalmiki muniraaya balla ||1||

raam.... shriraam....raam.... raghuraam....

maththe 'maa' eamdenalu hora bidda paapagaLu|
oththi oLage pogadamthe kavaaTavaagi ||
chiththa kaayagaLa pavithra maaDuva pariy|
bhakthavara hanumamthanu obba thaa balla ||2||

raam....raam.... raam.... shriraam....shriraam....shriraam....

dhareyoLi naamakke sari migilu illemdu|
parama vedagaLella pogaLuthihavu ||
siriyarasa puramdara viThalana naamavanu|
shivakaashiyoLagidda shivanu thaa balla ||3||

shri raama raama raamethi rame raame manorame|
sahasranaama thaththulyam raama naama varaanane ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru