ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಶೇಷದೇವ ವಾರುಣಿ ಪತಿ | ಜಗನ್ನಾಥ ವಿಠಲ Sheshadeva Varuni Pati | Jagannatha Vithala


ಸಾಹಿತ್ಯ : ಶ್ರೀ ಜಗನ್ನಾಥ ದಾಸರು (ಜಗನ್ನಾಥ ವಿಠಲ)
Kruti:Sri Jagannatha dasaru (Jagannatha vittala)


ಶೇಷದೇವ ವಾರುಣಿ ಪತಿ ಪಾಹಿ || ಪ ||

ಶೇಷದೇವ ತ್ರೈಘೋಷಣ ಮುಖಪರಿ ಪೋಷಿಸು ಎಮ್ಮಭಿಲಾಷೆಯ ಸಲಿಸಿ || ಅಪ ||

ಭಜಿಸುವೆ ಸರ್ವದ ಸುಜನರಭೀಷ್ಟದ ಸುಜನರಾಧಕ ಭುಜಗೋತ್ತಂಸ || ೧ ||

ಪುಣ್ಯಚರಿತ ಸುಶರಣ್ಯನೆ ಸುಬ್ರಹ್ಮಣ್ಯ ದೇವ ಕಾರುಣ್ಯ ಮೂರುತಿ || ೨ ||

ವಾರುಣಿಮುಖ ಸರೋರುಹ ದಿನಕರ ತೋರು ತವಾಂಘ್ರಿ ಮಹೋರಗರಾಜ || ೩ ||

ಅಸಿತವಸನ ಹಲ ಮುಸಲಾಯುಧ ಧರ ದ್ವಿಸಹಸ್ರೇಕ್ಷಣ ಸುಶರಣಪಾಲ || ೪ ||

ಪಾತಾಳಪ ಪುರುಹೂತನುತ ಜಗನ್ನಾಥ ವಿಠಲನ ಪ್ರೀತಿ ವಿಷಯನೆ || ೫ ||

shEShadEva vaaruNi pati paahi || pa ||

shEShadEva traighOShaNa muKapari pOShisu emmabhilaaSheya salisi || apa ||

bhajisuve sarvada sujanarabhIShTada sujanaraadhaka bhujagOttaMsa || 1 ||

puNyacarita susharaNyane subrahmaNya dEva kaaruNya mUruti || 2 ||

vaaruNimuKa sarOruha dinakara tOru tavaaMghri mahOragaraaja || 3 ||

asitavasana hala musalaayudha dhara dvisahasrEkShaNa susharaNapaala || 4 ||

paataaLapa puruhUtanuta jagannaatha viThalana prIti viShayane || 5 ||
 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru