ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಸಿಕ್ಕಿದನಲ್ಲೆ ಯಾದವರರಸಿಲ್ಲೆ | ಹಯವದನ | Sikkidanalle Yadava | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಸಿಕ್ಕಿದನಲ್ಲೆ ಯಾದವರರಸಿಲ್ಲೆ ||ಪ||
ಸಿಕ್ಕಿದನಲ್ಲೇ ದಕ್ಕಿದನಲ್ಲೆ  ||ಅ. ಪ||

ಗೋಪಿಯ ಕಂದನೆ ಬೆಣ್ಣೆಯ ತಿಂದನೆ
ಪೂತನಿಯ ಕೊಂದನೆ ಮಧುರೆಗೆ ಬಂದನೆ ||೧||

ಮಧವನಿವನೇ ವೇದಕೆ ಸಿಲುಕನೆ 
ಸಾಧುಗಳರಸನೆ ಸಜ್ಜನ ಪೋಷನೆ ||೨||

ಜಾಣರ ಜಾಣನೆ ಗಾನಕೆ ಪ್ರೀಯನೆ
ಮುನಿಗಳ ವಂದ್ಯನೆ ಮನ್ಮಥಪಿತನೆ ||೩||

ಕಾಮಿತನೀವೋನೆ ಭಾಮಾಪ್ರೀಯನೆ
ನೇಮದಿ ಭಜಿಪರಾ ಸದನಕ್ಕೆ ಬರುವನೆ ||೪||

ವೇದವ ತಂದನೆ ಗಿರಿಯ ಪೊತ್ತನೆ
ಬೇರನು ತಿಂದನೆ ಕಂಬದಿ ಬಂದನೆ ||೫||

ದಾನವ ಬೇಡ್ದನೆ ಕ್ಷತ್ರೇರ ಕೊಂದನೆ
ವನಕೆ ಪೋದನೆ ದುರುಳರ ಕೊಂದನೆ ||೬||

ಕಾಳೀಯ ಭಂಜನೆ ಬತ್ತಲೆ ನಿಂದನೆ
ಹಯವನೇರ್ದನೆ ಹಯವದನನೆ ||೭||

sikkidanalle yaadavararasille ||p|| 
sikkidanalle dakkidanalle ||a. p|| 

gopiya kamdane beNNeya thimdane 
puthaniya komdane madhurege bamdane ||೧|| 

madhavanivane vedake silukane 
saadhugaLarasane sajjana poshhane ||೨|| 

jaaNara jaaNane gaanake priyane 
munigaLa vamdyane manmathhapithane ||೩|| 

kaamithanivone bhaamaapriyane 
nemadi bhajiparaa sadanakke baruvane ||೪|| 

vedava thamdane giriya poththane 
beranu thimdane kambadi bamdane ||೫|| 

daanava beDdane kshhathrera komdane 
vanake podane duruLara komdane ||೬|| 

kaaLiya bhamjane baththale nimdane 
hayavanerdane hayavadanane ||೭||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru