ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ವೇಣಿ ಮಾಧವನ ತೋರಿಸೆ ಜಾಣೆ | ಹಯವದನ | Veni Madhavana Torise Jaane | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ ಕಾಣದೆ ನಿಲ್ಲಲಾರೆನೆ ||ಪ||
ಕಾಣುತ ಭಕ್ತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಸಾರೆ ಸುಖವಾಣಿ ||ಅ. ಪ||

ಬಂದೆನೆ ಬಹಳ ದೂರದಿ ಭವಸಾಗರತರಣಿ ನಿಂದೆನೆ ನಿನ್ನ ತೀರದಿ
ಒಂದುಗಳಿಗೆ ಹರಿ ಅಗಲಿ ನಾನಿರಲಾರೆ ಮಂದಗಮನೆ ಎನ್ನ ಮುಂದಕೆ ಕರೆಯೆ ||೧||

ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು ಕರುಣದಿಂದೆನ್ನ ಪೊರೆಯೆ
ಸ್ಮರಣೆ ಮಾತ್ರದಿ ಭವತಾಪವ ಹರಿಸುವ ಸ್ಮರನ ಪಿತ ಮುರಹರನ ಕರುಣದಿ ||೨||

ಸುಜನರಿಗೆಲ್ಲಾಧಾರಳೆ ಸುಖಶೀಲೆ ಕೇಳೆ ಕುಜನ ಸಂಗವನು ಕೀಳೆ
ನಿಜಪದವಿಯನೀವ ಹಯವದನನ ಪಾದ ವಾರಿಜ ತೋರಿಸೆ ಮದಗಜಗಮನೆ ||೩||

veNi maadhavana thorise jaaNe thriveNi kaaNade nillalaarene ||p|| 
kaaNutha bhakthara karuNadi salahuva jaaNe thriveNi saare sukhavaaNi ||a. p|| 

bamdene bahaLa duradi bhavasaagaratharaNi nimdene ninna thiradi 
oamdugaLige hari agali naaniralaare mamdagamane enna mumdake kareye ||೧|| 

sharaNaagathara paalipudu tharaLe ninna birudu karuNadimdenna poreye 
smaraNe maathradi bhavathaapava harisuva smarana pitha muraharana karuNadi ||೨|| 

sujanarigellaadhaaraLe sukhashile keLe kujana samgavanu kiLe 
nijapadaviyaniva hayavadanana paada vaarija thorise madagajagamane ||೩||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru