ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆರಂಭದಲಿ ನಮಿಪೆ | ಶ್ಯಾಮಸುಂದರ | Arambhadali Namipe | Shyamasundara


ಸಾಹಿತ್ಯ : ಶ್ರೀ ಶ್ಯಾಮಸುಂದರ ದಾಸರು
Kruti: Sri Shyamasundara Dasaru


ಆರಂಭದಲಿ ನಮಿಪೆ ಬಾಗಿ ಶಿರವ |
ಹೇರಂಬ ನೀನೊಲಿದು ನೀಡೆಮಗೆ ವರವ ||ಪ||

ದ್ವಿರದವದನನೆ ನಿರುತ ದ್ವಿರದವರದನ ಮಹಿಮೆ ಹರುಷದಲಿ ಕರಜಿಹ್ವೆ ಎರಡರಿಂದ |
ಬರೆದು ಪಾಡುವುದಕ್ಕೆ ಬರುವ ವಿಘ್ನವ ತರಿದು ಕರುಣದಿಂದಲಿ ಎನ್ನ ಕರ ಪಿಡಿದು ಸಲಹೆಂದು ||೧||

ಕುಂಭಿಣಿಜೆ ಪತಿರಾಮ ಜಂಬಾರಿ ಧರ್ಮಜರು ಅಂಬರಾಧಿಪ ರಕುತಾಂಬರನೆ ನಿನ್ನ || 
ಸಂಭ್ರಮದಿ ಪೂಜಿಸಿದರೆಂಬ ವಾರುತೆ ಕೇಳಿ | ಹಂಬಲವ ಸಲಿಸೆಂದು ನಂಬಿ ನಿನ್ನಡಿಗಳಿಗೆ ||೨||

ಸೋಮಶಾಪದ ವಿಜಿತ ಕಾಮ ಕಾಮಿತದಾತ ವಾಮದೇವನ ತನಯ ನೇಮದಿಂದ || 
ಶ್ರೀ ಮನೋಹರನಾದ ಶ್ಯಾಮಸುಂದರ ಸ್ವಾಮಿ | ನಾಮ ನೆನೆಯುವ ಭಾಗ್ಯ ಪ್ರೇಮದಲಿ ಕೊಡು ಎಂದು ||೩||

AraMbhadali namipe baagi shirava |
hEraMba nInolidu nIDemage varava ||pa||

dviradavadanane niruta dviradavaradana mahime haruShadali karajihve eraDariMda |
baredu paaDuvudakke baruva vighnava taridu karuNadiMdali enna kara piDidu salaheMdu ||1||

kuMbhiNije patiraama jaMbaari dharmajaru aMbaraadhipa rakutaaMbarane ninna || 
saMbhramadi pUjisidareMba vaarute kELi | haMbalava saliseMdu naMbi ninnaDigaLige ||2||

sOmashaapada vijita kaama kaamitadaata vaamadEvana tanaya nEmadiMda || 
shrI manOharanaada shyaamasuMdara svaami | naama neneyuva bhaagya prEmadali koDu eMdu ||3||
 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru