ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆವ ಕುಲವೋ ರಂಗ | ಹಯವದನ | Ava Kulavo Ranga | Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)

 

ಆವ ಕುಲವೋ ರಂಗ ಅರಿಯಬಾರದು || ಪ ||

ಆವ ಕುಲವೆಂದರಿಯಬಾರದು ಗೋವ ಕಾವ ಗೊಲ್ಲನಂತೆ
ಪಾರಿಜಾತದ ವೃಕ್ಷವ ಸತ್ಯಭಾಮೆಗೆ ತಂದಿತ್ತನಂತೆ || ಅಪ ||

ಗೋಕುಲದಲ್ಲಿ ಪುಟ್ಟಿದನಂತೆ ಗೋವಳರೊಡನೆ ಆಡಿದನಂತೆ
ಕೊಳಲನೂದಿ ಮೃಗಪಕ್ಷಿಗಳ ಮರುಳುಮಾಡಿದ ದೇವನಂತೆ || ೧ ||

ಕಾಲಲ್ಲಿ ಶಕಟನ ಒದ್ದನಂತೆ ಗೂಳಿಯ ಕೊಂಬು ಕಿತ್ತನಂತೆ
ಕಾಳಿಂಗನ ಹೆಡೆಯ ತುಳಿದು ಬಾಲೇರಿಗೊಲಿದ ದೇವನಂತೆ || ೨ ||

ಗೊಲ್ಲತೇರ ಮನೆಗಳಲ್ಲಿ ಕಳ್ಳತನವ ಮಾಡಿದನಂತೆ
ಮೆಲ್ಲನೆ ಪೂತನಿ ಅಸುವಹೀರಿ ಬಲ್ಲಿದ ಕಂಸನ ಕೊಂದನಂತೆ || ೩ ||

ಸರ್ಪ ತನ್ನ ಹಾಸಿಗೆಯಂತೆ ಪಕ್ಷಿ ತನ್ನ ವಾಹನವಂತೆ
ಸರ್ಪಭೂಷಣ ಮೊಮ್ಮಗನಂತೆ ಮುದ್ದುಮುಖದ ದೇವನಂತೆ || ೪ ||

ಕರಡಿಮಗಳ ತಂದನಂತೆ ಶರಧಿ ಮಗಳು ಮಡದಿಯಂತೆ
ಧರಣಿಯನ್ನು ಬೇಡಿದನಂತೆ ಈರೇಳು ಲೋಕದ ಒಡೆಯನಂತೆ || ೫ ||

ತರಳತನದಿ ಒರಳನೆಳೆದು ಮರನ ಕೆಡಹಿ ಮತ್ತವರ ಸಲಹಿ
ದುರುಳ ರಕ್ಕಸರನು ಕೊಂದ ಚೆಲುವ ಹಯವದನನಂತೆ || ೬ ||

Ava kulavO raMga ariyabaaradu || pa ||

Ava kulaveMdariyabaaradu gOva kaava gollanaMte
paarijaatada vRukShava satyabhaamege taMdittanaMte || apa ||

gOkuladalli puTTidanaMte gOvaLaroDane ADidanaMte
koLalanUdi mRugapakShigaLa maruLumaaDida dEvanaMte || 1 ||

kaalalli shakaTana oddanaMte gULiya koMbu kittanaMte
kaaLiMgana heDeya tuLidu baalErigolida dEvanaMte || 2 ||

gollatEra manegaLalli kaLLatanava maaDidanaMte
mellane pUtani asuvahIri ballida kaMsana koMdanaMte || 3 ||

sarpa tanna haasigeyaMte pakShi tanna vaahanavaMte
sarpabhUShaNa mommaganaMte muddumuKada dEvanaMte || 4 ||

karaDimagaLa taMdanaMte sharadhi magaLu maDadiyaMte
dharaNiyannu bEDidanaMte IrELu lOkada oDeyanaMte || 5 ||

taraLatanadi oraLaneLedu marana keDahi mattavara salahi
duruLa rakkasaranu koMda celuva hayavadananaMte || 6 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru