ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಎಲ್ಲಡಗಿದನೊ ಹರಿ | ವಿಜಯದಾಸರು | EllaDagidano hari | Vijayadasaru


ಸಾಹಿತ್ಯ : ಶ್ರೀ ವಿಜಯ ವಿಠಲ ದಾಸರು (ವಿಜಯ ವಿಠಲ)
Kruti:Sri Vijaya vithala dasaru (Vijaya vittala)


 ಎಲ್ಲಡಗಿದನೊ ಹರಿ ಎನ್ನಯ ದೊರಿ || ಪ ||

ಎಲ್ಲೆಲ್ಲಿ ಪರಿಪೂರ್ಣನೆಂಬೊ ಸೊಲ್ಲನು ಮುನ್ನಾ |
ಅಲ್ಲಲ್ಲಿ ಪುಸಿ ಮಾಡಿ ಮಲ್ಲ ಮರ್ದನ ಹರಿ || ಅಪ ||

ಶರಣೆಂದವರ ಕಾಯ್ವ ಕರುಣಾ ಸಮುದ್ರನು |
ತರುಣನ ಅರಿಯದೆ ಹರಿಣಾಂಕನಿಭವಕ್ತ್ರ || ೧ ||

ಕರಿರಾಜನ ಮೊರೆ ಕೇಳಿ ತ್ವರಿತದಿಂದ |
ಗರುಡನೇರಿ ಬಂದ ಗರ್ವರಹಿತ ದೇವ || ೨ ||

ವರ ಭುಜದಲಿ ಶಂಖಚಕ್ರವ ಧರಿಸಿದ |
ಪರಮಸುಂದರ ಮೂರ್ತಿ ಪರಮೇಷ್ಠಿ ಜನಕನು || ೩ ||

ವನಜ ಮಲ್ಲಿಗೆ ಜಾಜಿ ವನದಲ್ಲಿ ಚಲಿಸುವ | 
ವನಿತೆಯರಾಟಕ್ಕೆ ಮನಮೆಚ್ಚಿ ನಡೆದಾನೊ || ೪ ||

ಗೋವುಗಳ ಹಿಂಡು ಗೋಪಾಲರನು ಕಂಡು |
ಕಾವ ವಿಷಯಕ್ಕಾಗಿ ಕಮಲಲೋಚನ ಹರಿ || ೫ ||

ಇನಚಂದ್ರನಿಭವಕ್ತ್ರ ಕನಕಾಂಬರಧರ |
ವಿನಯದಿಂದಾಡುತ್ತ ಮುನಿಗಳಲ್ಲಿಗೆ ದೇವ || ೬ ||

ಗಜಧ್ರುವ ಬಲಿ ಪಾಂಚಾಲಿ ವರದನೆಂಬ |
ನಿಜವಾದ ಬಿರುದುಳ್ಳ ವಿಜಯವಿಠ್ಠಲರೇಯ || ೭ ||

ellaDagidano hari ennaya dori || pa ||

ellelli paripUrNaneMbo sollanu munnaa |
allalli pusi maaDi malla mardana hari || apa ||

sharaNeMdavara kaayva karuNaa samudranu |
taruNana ariyade hariNaaMkanibhavaktra || 1 ||

kariraajana more kELi tvaritadiMda |
garuDanEri baMda garvarahita dEva || 2 ||

vara bhujadali shaMKacakrava dharisida |
paramasuMdara mUrti paramEShThi janakanu || 3 ||

vanaja mallige jaaji vanadalli calisuva | 
vaniteyaraaTakke manamecci naDedaano || 4 ||

gOvugaLa hiMDu gOpaalaranu kaMDu |
kaava viShayakkaagi kamalalOcana hari || 5 ||

inacaMdranibhavaktra kanakaaMbaradhara |
vinayadiMdaaDutta munigaLallige dEva || 6 ||

gajadhruva bali paaMcaali varadaneMba |
nijavaada biruduLLa vijayaviThThalarEya || 7 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru