ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಗಣಪತಿ ಎನ್ನ ಪಾಲಿಸೋ | ವೆಂಕಟವಿಠಲ | Ganapati Enna Paliso | Venkata Vithala


ಸಾಹಿತ್ಯ : ಶ್ರೀ ವೆಂಕಟವಿಠಲ ದಾಸರು
Kruti: Sri Venkata Vittala Dasaru


ಗಣಪತಿ ಎನ್ನ ಪಾಲಿಸೋ ಗಂಭೀರ ||ಪ||

ಪಾರ್ವತಿ ನಂದನ ಸುಂದರ ವದನ || ಶರ್ವಾದಿ ಸುರಪ್ರಿಯ ಶಿರ ಬಾಗುವೆನು ||೧||

ಆದಿಪೂಜಿತ ನೀನು ಮೋದ ಭಕ್ತರಿಗೀವ | ಮಾಧವನಲಿ ಮನ ಸದಾ ನಿಲ್ಲಿಸೋ ನೀ ||೨||

ಪಂಕಜ ನಯನ ಶ್ರೀ ವೆಂಕಟವಿಠಲನ ಕಿಂಕರನೆನಿಸೆನ್ನ ಶಂಕರ ತನಯನೇ ||೩||

gaNapati enna pAlisO gaMBIra ||pa||
 
pArvati naMdana suMdara vadana || sharvAdi surapriya shira bAguvenu ||1||
 
AdipUjita nInu mOda BaktarigIva | mAdhavanali mana sadA nillisO nI ||2||
 
paMkaja nayana SrI veMkaTaviThalana kiMkaranenisenna SaMkara tanayanE ||3||

 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru