ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಗೋದಾವರಿ ನದಿ ಕುರಿತು ವಾದಿರಾಜರ ಕೃತಿ | ಗೋದೆ ಸಮಸ್ತ | Gode samasta | Vadirajaru | A Song on River Godavari


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಗೋದೆ ಸಮಸ್ತಫಲದೆ ಸ್ನಾನ ಒದಗಿಮಾಡಿದರೊಮ್ಮೆ ವೈಕುಂಠಪದವೀವೆ || ಪ ||

ಬ್ರಹ್ಮಾದ್ರಿ ಶಿಖರದಿಂ ಪುಟ್ಟಿ ನೀನು ಬಲು
ಬ್ರಹ್ಮ ಋಷಿಯಾದ ಗೌತಮ ಮುನಿಯ
ಬ್ರಾಹ್ಮರಿಂದಲಿ ಬಂದ ಗೋಹತ್ಯ ಪರಿಹರಿಸಿ
ಅಮ್ಮಮ್ಮ ಸಪ್ತಮುಖದಿಂದ ಸಾಗರವ ಬೆರೆದೆ || ೧ ||

ಆದಿಯಲಿ ತ್ರಿಯಂಬಕನ ಜಡೆಯಲುದಿಸಿದೆ ನೀನು
ಮುದದಿಂದ ಪಶ್ಚಿಮಕಾಗಿ ನಡೆಯೆ ಕಂಡು
ಒದಗಿ ಗೌತಮನು ಕುಶದಿಂದ ತಿರುಗಿಸಲು ನೀ
ಸದಮಲ ಕುಶಾವರ್ತಳೆಂದೆನಿಸಿಕೊಂಡೆ || ೨ ||

ಔದುಂಬರ ವೃಕ್ಷಮೂಲದಿಂದುದ್ಭವಿಸಿ
ಉದಧಿಯನು ಕೂಡಬೇಕೆಂದು ಬೇಗ
ಮೇದಿನಿಯಿಳಿದು ತಿರುಗುತಲಿ ನೀ ಮುದದಿಂದ
ಆದರದಿ ಪೂರ್ವಾಬ್ಧಿಯನು ಕೂಡಿದೆ || ೩ ||

ಸಿಂಹರಾಸಿಯಲಿ ಸುರಗುರು ಬಂದುದು ಕೇಳಿ
ಅಂವ್ಹಂ ರಾಸಿಗಳು ಸಂಹಾರಕಾಗಿ
ಬಂಹ್ವಾಯಾಸದಿ ಬಂದು ನಿಮ್ಮನು ಕಂಡೆ
ಅಂವ್ಹಂಗಳು ಪರಿಹರಿಸಿ ಮುಕುತಿಯ ಕೊಡು ದೇವಿ || ೪ ||

ವಿನಯದಲಿ ಸ್ನಾನಪಾನವನು ಮಾಡುವರಿಗೆ
ವನಜಾಕ್ಷ ಹಯವದನ ಹರಿಯ
ವನಜನಾಭನ ಲೋಕಸಾಧನವಾದ
ಘನ ಭಕುತಿಯನಿತ್ತು ರಕ್ಷಿಸು ದೇವಿ || ೫ ||

gOde samastaPalade snAna odagimADidaromme vaikuMThapadavIve || pa ||

brahmAdri SiKaradiM puTTi nInu balu
brahma RuShiyAda gautama muniya
brAhmariMdali baMda gOhatya pariharisi
ammamma saptamuKadiMda sAgarava berede || 1 ||

Adiyali triyaMbakana jaDeyaludiside nInu
mudadiMda paScimakAgi naDeye kaMDu
odagi gautamanu kuSadiMda tirugisalu nI
sadamala kuSAvartaLeMdenisikoMDe || 2 ||

auduMbara vRukShamUladiMdudBavisi
udadhiyanu kUDabEkeMdu bEga
mEdiniyiLidu tirugutali nI mudadiMda
Adaradi pUrvAbdhiyanu kUDide || 3 ||

siMharAsiyali suraguru baMdudu kELi
aMvhaM rAsigaLu saMhArakAgi
baMhvAyAsadi baMdu nimmanu kaMDe
aMvhaMgaLu pariharisi mukutiya koDu dEvi || 4 ||

vinayadali snAnapAnavanu mADuvarige
vanajAkSha hayavadana hariya
vanajanABana lOkasAdhanavAda
Gana Bakutiyanittu rakShisu dEvi || 5 ||

Popular posts from this blog

ಹರಿಕಥಾಮೃತಸಾರ | ಪಿತೃಗಣ ಸಂಧಿ | ಜಗನ್ನಾಥವಿಠಲ | Pitrugana Sandhi | Jagannatha Dasaru | Harikathamruthasara

ಗೌರಿ ಆರತಿ ಹಾಡು | ಗೌರಿ ದೇವಿಗೆ ಸಖಿ | ಶ್ಯಾಮಸುಂದರ | Gouri Arati Song | Gouri Devige| Shyamasundara

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru