ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಗೋವಿಂದ ಗೋಪಾಲ | ಹಯವದನ | Govinda Gopala Gopika | Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಗೋವಿಂದ ಗೋಪಾಲ ಗೋಪಿಕಾವಲ್ಲಭ ಗೋವರ್ಧನೋದ್ಧಾರಕ || ಪ. ||

ನಾರಾಯಣ ಆಚ್ಯುತ ನರಮೃಗರೂಪ ಶ್ರೀಪತಿ ಶೌರಿ ಹರಿ 
ವಾರಿಜೋದ್ಭವವಂದ್ಯ ವಂದಿತ ಚರಿತ್ರ 
ಪುರಮರ್ದನಮಿತ್ರ ಪರಮಪವಿತ್ರ || 1 ||

ಗರುಡತುರಗಗಮನ ಕಲ್ಯಾಣಗುಣಗಣ
ನಿರುಪಮಲಾವಣ್ಯ ನಿರ್ಮಲಶರಣ್ಯ 
ಪರಮಮುನಿವರೇಣ್ಯ ಭಕ್ತಲೋಕಕಾರುಣ್ಯ || 2 ||

ಇನಶಶಿಲೋಚನ ಇಂದುನಿಭಾನನ 
ಎನುತ ಕುಂಡಲನಾದನ 
ಕನಕಮಯವಾಸನ ಘನ ಪಾಪನಾಶನ
ಎನುತ ಕುಂಡಲನಾದ ವೇಣುನಾದ ಹಯವದನ || 3 ||

gOviMda gOpAla gOpikAvallaBa gOvardhanOddhAraka || pa. ||

nArAyaNa Acyuta naramRugarUpa SrIpati Sauri hari 
vArijOdBavavaMdya vaMdita caritra 
puramardanamitra paramapavitra || 1 ||

garuDaturagagamana kalyANaguNagaNa
nirupamalAvaNya nirmalaSaraNya 
paramamunivarENya BaktalOkakAruNya || 2 ||

inashashilOcana iMduniBAnana 
enuta kuMDalanAdana 
kanakamayavAsana Gana pApanASana
enuta kuMDalanAda vENunAda hayavadana || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru