ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕೊಂಡಾಲಳವೇ ನಿನ್ನಯ ಕೀರ್ತಿ | ಹಯವದನ| Kondadalalave ninnaya keerthi | Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಕೊಂಡಾಲಳವೇ ನಿನ್ನಯ ಕೀರ್ತಿ 
ಭೂಮಂಡಲದೊಳಗೆ ಹಯಗ್ರೀವ ಮೂರ್ತಿ || ಪ ||

ವೇದಂಗಳ ಜಲದಿಂದ ತಂದೆ ನೀ |
ಪೋದಗಿರಿಯ ಬೆನ್ನೊಳಾಂತು ನಿಂದೆ ||
ಮೇದಿನಿಯ ಕದ್ದೊಯ್ದನ ಕೊಂದೆ ಸಂ
ವಾದದಿಂದ ಕಂಬದಿಂದ ಬಂದೆ || ೧ ||

ಚರಣಾಗ್ರದಲಿ ನದಿಯ ಪೆತ್ತೆ | ತೀಕ್ಷ್ಣ 
ಪರಶು ಪಿಡಿದು ಬಾಹುಜರ ಕಿತ್ತೆ |
ನೆರೆನಂಬಿದವಗೆ ಸ್ಥಿರ ಪಟ್ಟವನಿತ್ತೆ | ದೊಡ್ಡ 
ದುರುಳ ಕಾಳಿಂಗನ ಶಿರದಲಿ ನಿಂತೆ || ೨ ||

ಪತಿವ್ರತೆಯರ ಮಾನ ಭೇದನ ಚತುರ 
ತುರುಗವೇರಿ ನಲಿವನ 
ಕ್ಷಿತಿಯೊಳುತ್ತಮ ವಾದಿರಾಜನ ಸ್ವಾಮಿ 
ಸತತ ರಕ್ಷಿಪ ಶ್ರೀಹಯವದನನ || ೩ ||

koMDAlaLavE ninnaya kIrti 
BUmaMDaladoLage hayagrIva mUrti || pa ||

vEdaMgaLa jaladiMda taMde nI |
pOdagiriya bennoLAMtu niMde ||
mEdiniya kaddoydana koMde saM
vAdadiMda kaMbadiMda baMde || 1 ||

charaNAgradali nadiya pette | tIkShNa 
paraSu piDidu bAhujara kitte |
nerenaMbidavage sthira paTTavanitte | doDDa
duruLa kALiMgana Siradali niMte || 2 ||

pativrateyara mAna BEdana catura 
turugavEri nalivana 
kShitiyoLuttama vAdirAjana svAmi 
satata rakShipa SrIhayavadanana || 3 ||

 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru