ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರಾಮ ಮಂತ್ರವ ಜಪಿಸೋ | ಪುರಂದರ ವಿಠಲ | Rama Mantrava Japiso | Purandara Vithala


ಸಾಹಿತ್ಯ : ಶ್ರೀ ಪುರಂದರ  ದಾಸರು
Kruti: Sri Purandara dasaru


ರಾಮ ಮಂತ್ರವ ಜಪಿಸೋ ಹೇ ಮನುಜ ||ಪ|| 

ಆ ಮಂತ್ರ ಈ ಮಂತ್ರ ಜಪಿಸಿ ನೀ ಕೆಡಬೇಡ 
ಸೋಮಶೇಖರ ತನ್ನ ಭಾಮೆಗೆ ಪೇಳಿದ ಮಂತ್ರ ||ಅಪ|| 

ಕುಲಹೀನನಾದರೂ ಕೂಗಿ ಜಪಿಸುವ ಮಂತ್ರ 
ಜಲಜವಾಣಿ ನಿತ್ಯ ಸೇವಿಪ ಮಂತ್ರ 
ಕಲುಷ ಪರ್ವತಕಿದು ಕುಲಿಶವಾಗಿಪ್ಪ ಮಂತ್ರ 
ಸುಲಭದಿಂದಲಿ ಮೋಕ್ಷ ಸೂರೆಗೊಂಬುವ ಮಂತ್ರ ||೧|| 

ಮರುತಾತ್ಮಜ ನಿತ್ಯ ಸ್ಮರಣೆ ಮಾಡುವ ಮಂತ್ರ | 
ಸರ್ವ ಋಷಿಗಳಲ್ಲಿ ಸೇರಿದ ಮಂತ್ರ | 
ದುರಿತ ಕಾನನಕಿದು ದಾವಾನಲ ಮಂತ್ರ | 
ಪೊರೆದು ವಿಭೀಷಣಗೆ ಪಟ್ಟಕಟ್ಟಿದ ಮಂತ್ರ ||೨|| 

ಜ್ಞಾನನಿಧಿ ನಮ್ಮ ಆನಂದತೀರ್ಥರು 
ಸಾನುರಾಗದಿ ನಿತ್ಯ ಸೇವಿಪ ಮಂತ್ರ || 
ಭಾನು ಕುಲಾಂಬುಧಿ ಸೋಮನೆನಿಪ ಮಂತ್ರ 
ದೀನ ರಕ್ಷಕ ನಮ್ಮಾ ಪುರಂದರ ವಿಠಲನ ಮಂತ್ರ ||೩|| 

rAma maMtrava japisO hE manuja ||pa|| 
 
A maMtra I maMtra japisi nI keDabEDa 
sOmaSEKara tanna BAmege pELida maMtra ||apa|| 
 
kulahInanAdarU kUgi japisuva maMtra 
jalajavANi nitya sEvipa maMtra 
kaluSha parvatakidu kuliSavAgippa maMtra 
sulaBadiMdali mOkSha sUregoMbuva maMtra ||1|| 
 
marutAtmaja nitya smaraNe mADuva maMtra | 
sarva RuShigaLalli sErida maMtra | 
durita kAnanakidu dAvAnala maMtra | 
poredu viBIShaNage paTTakaTTida maMtra ||2|| 
 
jnAnanidhi namma AnaMdatIrtharu 
sAnurAgadi nitya sEvipa maMtra || 
BAnu kulAMbudhi sOmanenipa maMtra 
dIna rakShaka nammA puraMdara viThalana maMtra ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru