ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರಮಾ ಸಮುದ್ರನ | ಶೇಷ ವಿಠಲ | Ramaa Samudrana | Shesha Vithala


ಸಾಹಿತ್ಯ : ಶ್ರೀ ಶೇಷ ವಿಠಲ ದಾಸರು
Kruti:Sri Shesha Vittala Dasaru 


ರಮಾ ಸಮುದ್ರನ ಕುಮಾರಿ ನಿನ್ನ ಸರಿ ಸಮಾನರ‍್ಯಾರಮ್ಮ ||ಪ||
ಉಮೇಶ ಮೊದಲಾದ ಅಮರನಿಕರವು ಭ್ರಮಿಸಿ ನಿನ್ನ ಪಾದ ಕಮಲ ಭಜಿಪರೋ ||ಅಪ||

ಅಪಾರ ಮಹಿಮನ ವ್ಯಾಪಾರಗಳ ತಿಳಿದು ಕಾಪಾಡು ಈ ಜಗವಾ ||
ಕೋಪರಹಿತಳಾಗಿ ಶ್ರೀಪತಿಯೊಳು ನಮ್ಮ ತಾಪತ್ರಯವ ಪೇಳಿ ಕಾಪಾಡಬೇಕಮ್ಮ ||೧||

ಕರುಣಾವಾರಿಧಿ ಎಂದು ಶರಣ ಜನರು ನಿನ್ನ ಸ್ಮರಣೆಯ ಮಾಡುವರೇ ||
ಹರಿಣಾಕ್ಷಿ ಕೇಳೆಲೆ ಕರುಣದಿಂದ |
ಹರಿ ಚರಣವ ತೋರಿ ಅಘಹರಣವ ಮಾಡಿಸೇ ||೨||

ವಾಸವನುತ ಸಿರಿ ಶೇಷ ವಿಠಲನೊಳು |
ವಾಸವ ಮಾಡುವಳೇ || ಘಾಸಿಗೊಳಿಸದಲೆ ಈ ಸಮಯದಲಿ | ವಾಸುದೇವಗೆ ಪೇಳಿ ಪೋಷಿಸಬೇಕಮ್ಮ ||೩||

ramaa samudrana kumaari ninna sari samaanar^yaaramma ||pa||
umEsha modalaada amaranikaravu bhramisi ninna paada kamala bhajiparO ||apa||

apaara mahimana vyaapaaragaLa tiLidu kaapaaDu I jagavaa ||
kOparahitaLaagi shrIpatiyoLu namma taapatrayava pELi kaapaaDabEkamma ||1||

karuNaavaaridhi eMdu sharaNa janaru ninna smaraNeya maaDuvarE ||
hariNaakShi kELele karuNadiMda |
hari caraNava tOri aghaharaNava maaDisE ||2||

vaasavanuta siri shESha viThalanoLu |
vaasava maaDuvaLE || ghaasigoLisadale I samayadali | vaasudEvage pELi pOShisabEkamma ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru