ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆವ ಸಿರಿಯಲಿ ನೀನು | ಕಾಗಿನೆಲೆಯಾದಿ ಕೇಶವ | Ava siriyali ninu | Kaaginele Adi Keshava


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanaka Dasaru


ಆವ ಸಿರಿಯಲಿ ನೀನು ಎನ್ನ ಮರೆತೆ?
ದೇವ ಜಾನಕೀರಮಣ ಪೇಳು ರಘುಪತಿಯೆ || ಪ ||

ಸುರರ ಸೆರೆಯನು ಬಿಡಿಸಿ ಬಂದನೆಂಬಾ ಸಿರಿಯೆ
ಕರಿ ಮೊರೆಯ ಲಾಲಿಸಿದೆ ಎಂಬ ಸಿರಿಯೆ 
ಶರಧಿಗೆ ಸೇತುವೆಯ ಕಟ್ಟಿಸಿದೆನೆಂಬಾ ಸಿರಿಯೆ
ಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ  || ೧ ||

ಕಡಲೊಳಗೆ ಮನೆ ಮಾಡಿ ಮಲಗಿದೆನೆಂಬಾ ಸಿರಿಯೆ
ಮೃಡ ನಿನ್ನ ಸಖನಾದನೆಂಬ ಸಿರಿಯೆ 
ಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆ
ದೃಢವಾಗಿ ಹೇಳೆನಗೆ ದೇವಕೀಸುತನೆ || ೨ || 

ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆ
ಕಾಮ ನಿನ್ನ ಸುತನಾದನೆಂಬ ಸಿರಿಯೆ
ಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆ
ಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ || ೩ ||

ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆ
ಹನುಮ ನಿನ್ನ ಬಂಟನಾದೆನೆಂಬ ಸಿರಿಯೆ
ಬಿನುಗುದೈವಗಳು ನಿನಗೆಣೆಯಿಲ್ಲವೆಂಬ ಸಿರಿಯೆ
ಅನುಮಾನ ಮಾಡದೆಲೆ ಪೇಳು ನರಹರಿಯೆ || ೪ ||

ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿ
ಪಂಥವೇ ನಿನಗಿದು ಆವ ನಡತೆ
ಕಂತುಪಿತ ಕಾಗಿನೆಲೆಯಾದಿಕೇಶವ ರಂಗ
ಚಿಂತೆಯನು ಬಿಡಿಸಿ ಸಂತೋಷವನುಪಡಿಸೊ || ೫ ||

Ava siriyali nInu enna marete?
dEva jAnakIramaNa pELu raGupatiye || pa ||

surara sereyanu biDisi baMdaneMbA siriye
kari moreya lAliside eMba siriye 
Saradhige sEtuveya kaTTisideneMbaa siriye
sthiravAgi hELenage hELu raGupatiye  || 1 ||

kaDaloLage mane mADi malagideneMbA siriye
mRuDa ninna saKanAdaneMba siriye 
biDade draupadi mAna kAydeneMbaa siriye
dRuDhavAgi hELenage dEvakIsutane || 2 || 

BUmiyanu mUraDiya mADideneMba siriye
kAma ninna sutanAdaneMba siriye
A mahAlakumi ninna satiyAdaLeMba siriye
prEmadali hELenage svAmi acyutane || 3 ||

manujarellaru ninna stutisuvareMba siriye
hanuma ninna baMTanAdeneMba siriye
binugudaivagaLu ninageNeyillaveMba siriye
anumAna mADadele pELu narahariye || 4 ||

iMtu siriyali nInu enna maretare svAmi
paMthavE ninagidu Ava naDate
kaMtupita kAgineleyAdikESava raMga
ciMteyanu biDisi saMtOShavanupaDiso || 5 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru