ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾರೋ ಮನೆಗೆ ಬಾರೋ ವೆಂಕಟ | ವಿಜಯ ವಿಠಲ | Baaro Manege Baaro | Vijaya Vithala


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಬಾರೋ ಮನೆಗೆ ಬಾರೋ ವೆಂಕಟರಮಣ || ಪ ||

ಕಂಸಾಸುರ ಮರ್ದನನೇ ಬಾರೋ
ಕೌಶಿಕ ಯಜ್ಞಪ ಬಾರೋ
ಹಂಸಡಿಬಿಕನಂತಕ ಬಾರೋ
ಹಂಸವಾಹನನ ಪಿತನೇ ಬಾರೋ || ೧ ||

ಸಾಸಿರಮುಖನ ಪೆತ್ತವನೇ ಬಾರೋ
ಸಾಸಿರಗಣ್ಣಿನ ಅನುಜ ಬಾರೋ
ಸಾಸಿರವದನ ಶಯನ ಬಾರೋ 
ಭೂಸುರರಿಗೆ ಪ್ರಿಯನೇ ಬಾರೋ || ೨ ||

ವಾರಿಧಿಯೊಳು ಪೊಕ್ಕವನೇ ಬಾರೋ
ವಾರಿಧಿಯ ಮಾನಭಂಗನೇ ಬಾರೋ
ವಾರಿಧಿಸುತೆಯ ಪಡೆದ ಕರುಣಾವಾರಿಧಿ
ಸಿರಿ ವಿಜಯವಿಠಲ ಬಾರೋ || ೩ ||

baarO manege baarO veMkaTaramaNa || pa ||

kaMsaasura mardananE baarO
koushika yajnapa baarO
haMsaDibikanaMtaka baarO
haMsavaahanana pitanE baarO || 1 ||

saasiramuKana pettavanE baarO
saasiragaNNina anuja baarO
saasiravadana shayana baarO 
bhUsurarige priyanE baarO || 2 ||

vaaridhiyoLu pokkavanE baarO
vaaridhiya maanabhaMganE baarO
vaaridhisuteya paDeda karuNaavaaridhi
siri vijayaviThala baarO || 3 ||
 

Popular posts from this blog

ಹರಿಕಥಾಮೃತಸಾರ | ಪಿತೃಗಣ ಸಂಧಿ | ಜಗನ್ನಾಥವಿಠಲ | Pitrugana Sandhi | Jagannatha Dasaru | Harikathamruthasara

ಗೌರಿ ಆರತಿ ಹಾಡು | ಗೌರಿ ದೇವಿಗೆ ಸಖಿ | ಶ್ಯಾಮಸುಂದರ | Gouri Arati Song | Gouri Devige| Shyamasundara

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru