ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಎಂದು ಕಾಂಬೆನೋ ಎನ್ನ ಸಲಹುವ | ಪ್ರಸನ್ನ ವೆಂಕಟ | Endu Kambeno Enna Salahuva | Prasanna Venkata


ಸಾಹಿತ್ಯ : ಶ್ರೀ ಪ್ರಸನ್ನ ವೆಂಕಟ ದಾಸರು
Kruti: Sri Prasanna Venkata Dasaru


ಎಂದು ಕಾಂಬೆನೋ ಎನ್ನ ಸಲಹುವ ತಂದೆ ಉಡುಪಿನ ಜಾಣನ | 
ಮಂದಹಾಸ ಪ್ರವೀಣನ ಇಂದಿರಾ ಭೂ ರಮಣನ ||ಪ||

ಕಡಲ ದಡದೊಳು ಎಸೆವ ರಂಗನ ಕಡಗೋಲ್ ನೇಣನು ಪಿಡಿದನಾ | 
ಮೃಡ ಪುರಂದರರೊಡೆಯನ ಈರಡಿಗಳಲಿ ಶಿರವಿಡುವೆನಾ ||೧||

ದೇವಕಿಯ ಜಠರದಲಿ ಬಂದನ ಆವ ಪಳ್ಳಿಲಿ ನಿಂದನ | 
ಮಾವ ಕಂಸನ ಕೊಂದನ ಕಾವನಯ್ಯ ಮುಕುಂದನ ||೨||

ಪೂರ್ಣಪ್ರಜ್ಞರಿಗೊಲಿದು ದ್ವಾರಕೆ ಮಣ್ಣಿನೊಳು ಪ್ರಕಟಿಸಿದನ | 
ಭವಾರ್ಣವಕೆ ಪ್ಲವನಾದನ ಪ್ರಸನ್ನ ವೆಂಕಟ ಕೃಷ್ಣನ ||೩||

eMdu kAMbenO enna salahuva taMde uDupina jANana | 
maMdahAsa pravINana iMdirA BU ramaNana ||pa||
 
kaDala daDadoLu eseva raMgana kaDagOlnENanu piDidanA | 
mRuDa puraMdararoDeyana IraDigaLali SiraviDuvenA ||1||
 
dEvakiya jaTharadali baMdana Ava paLLili niMdana | 
mAva kaMsana koMdana kAvanayya mukuMdana ||2||
 
pUrNaprajnarigolidu dvArake maNNinoLu prakaTisidana | 
BavArNavake plavanAdana prasanna veMkaTa kRuShNana ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru