ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಹದಿನಾಲ್ಕು ಲೋಕಗಳನಾಳುವ ತಂದೆಗೆ | ವಿಜಯವಿಠ್ಠಲ | Hadinalku Lokagala | Vijayavittala


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಹದಿನಾಲ್ಕು ಲೋಕಗಳನಾಳುವ ತಂದೆಗೆ |
ಮುದದಿಂದ ನಾನೊಬ್ಬ ಭಾರವಾದೆನೆ || ಪ ||

ಸುರಗಿರಿ ಶರಧಿಯೊಳು ಕಡೆವಾಗ ಮುಳುಗಲಾ ||
ಭರದಿಂದ ಪೋಗಿ ಬೆನ್ನಾಂತು ಪೊತ್ತೆ ||
ಧರಣಿಯು ಮೊರೆಯಿಡೆ ತ್ವರದಲಿ ಬಂದು |
ಭೂತರುಣಿಯ ಸೆರೆಬಿಡಿಸಿ ಉಳುಹಿಕೊಳ್ಳಲಿಲ್ಲವೆ || ೧ ||

ಸುರಪತಿ ಮುನಿದೇಳು ಹಗಲಿರುಳು ಮಳೆಗರೆಯೆ |
ಬೆರಳಲಿ ಧರಿಸಿ ತುರುಗಳ ಕಾಯ್ದೆ ನಿಜವೆ ||
ವರಮುನಿ ನಿನ್ನನ್ನು ಬೇಡಲಾಗಿ ಬೆದರಿ ನರ- |
ನರಸಿ ನಿನ್ನ ಕರೆಯೆ ಕರುಣದಿ ಪಾಲಿಸಿದೆ || ೨ ||

ಜಲಜಾಕ್ಷ ಬೆಟ್ಟವನು ಪೊತ್ತು ಬಳಲಿದಾಗ |
ಸಲಹಬೇಕೆಂದು ಬೇಸರಿಸಲಿಲ್ಲಾ ||
ಸುಲಭದಲಿ ಶೇಷಾಚಲನಾಗಿಪ್ಪ |
ಒಲಿದೆನ್ನ ಸಂರಕ್ಷಿಸೊ ವಿಜಯವಿಠ್ಠಲನೆ || ೩ ||

hadinAlku lOkagaLanALuva taMdege |
mudadiMda nAnobba BAravAdene || pa ||

suragiri SaradhiyoLu kaDevAga muLugalA ||
BaradiMda pOgi bennAMtu potte ||
dharaNiyu moreyiDe tvaradali baMdu |
BUtaruNiya serebiDisi uLuhikoLLalillave || 1 ||

surapati munidELu hagaliruLu maLegareye |
beraLali dharisi turugaLa kAyde nijave ||
varamuni ninnannu bEDalAgi bedari nara- |
narasi ninna kareye karuNadi pAliside || 2 ||

jalajAkSha beTTavanu pottu baLalidAga |
salahabEkeMdu bEsarisalillA ||
sulaBadali SEShAcalanAgippa |
olidenna saMrakShiso vijayaviThThalane || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru