ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಜೋ ಜೋ ಶ್ರೀ ಕೃಷ್ಣ | ಪುರಂದರ ವಿಠಲ | Jo Jo Sri Krishna | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ಜೋ ಜೋ ಶ್ರೀ ಕೃಷ್ಣ ಪರಮಾನಂದ 
ನಂದಗೋಪಿಯ ಕಂದ ನಂದ ಮುಕುಂದ ಜೋ ಜೋ ||ಪ||

ಪಾಲುಗಡಲೊಳು ಪವಡಿಸಿದವನೆ 
ಆಲದೆಲೆಯ ಮೇಲೆ ಮಲಗಿದ ಮಗುವೆ 
ಶ್ರೀಲಲಿತಾಂಗಿಯರ ಚಿತ್ತದೊಲ್ಲಭನೆ 
ಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋ ಜೋ ||೧||

ಹೊಳೆವಂಥ ರನ್ನದ ತೊಟ್ಟಿಲ ಮೇಲೆ 
ಥಳಥಳಿಸುವ ಗುಲುಗುಂಜಿಯ ಮಾಲೆ 
ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲ 
ನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋ ಜೋ ||೨||

ಆರ ಕಂದ ನೀನು ಆರ ನಿಧಾನಿ 
ಆರ ರತ್ನವೋ ನೀನು ಆರ ಮಾಣಿಕವೋ 
ಸೇರಿತು ಎನಗೊಂದು ಚಿಂತಾಮಣಿಯೆಂದು 
ಬಾಲ ನಿನ್ನನು ಪಾಡಿ ತೂಗುವೆನಯ್ಯಾ ಜೋ ಜೋ ||೩||

ಗುಣನಿಧಿಯೆ ನಿನ್ನನೆತ್ತಿಕೊಂಡಿದ್ದರೆ 
ಮನೆಯ ಕೆಲಸವಾರು ಮಾಡುವರಯ್ಯ 
ಮನಕೆ ಸುಖನಿದ್ರೆಯ ತಂದುಕೊ ಬೇಗ 
ಫಣಿಶಯನನೆ ನಿನ್ನ ಪಾಡಿ ತೂಗುವೆನು ಜೋ ಜೋ ||೪||

ಅಂಡಜವಾಹನ ಅನಂತಮಹಿಮ 
ಪುಂಡರೀಕಾಕ್ಷ ಶ್ರೀ ಪರಮಪಾವನ್ನ 
ಹಿಂಡು ದೈವದ ಗಂಡ ಉದ್ಧಂಡನೆ 
ಪಾಂಡುರಂಗ ಶ್ರೀ ಪುರಂದರ ವಿಠಲ ಜೋ ಜೋ ||೫||

jO jO SrI kRuShNa paramAnaMda 
naMdagOpiya kaMda naMda mukuMda jO jO ||pa||
 
pAlugaDaloLu pavaDisidavane 
Aladeleya mEle malagida maguve 
SrIlalitAMgiyara cittadollaBane 
bAla ninnanu pADi tUguvenayya jO jO ||1||
 
hoLevaMtha rannada toTTila mEle 
thaLathaLisuva guluguMjiya mAle 
aLade nI piDidADennaya muddu bAla 
naLinanABane ninna pADi tUguvenu jO jO ||2||
 
Ara kaMda nInu Ara nidhAni 
Ara ratnavO nInu Ara mANikavO 
sEritu enagoMdu ciMtAmaNiyeMdu 
bAla ninnanu pADi tUguvenayyA jO jO ||3||
 
guNanidhiye ninnanettikoMDiddare 
maneya kelasavAru mADuvarayya 
manake suKanidreya taMduko bEga 
PaNiSayanane ninna pADi tUguvenu jO jO ||4||
 
aMDajavAhana anaMtamahima 
puMDarIkAkSha SrI paramapAvanna 
hiMDu daivada gaMDa uddhaMDane 
pAMDuraMga SrI puraMdara viThala jO jO ||5||

Popular posts from this blog

ಹರಿಕಥಾಮೃತಸಾರ | ಪಿತೃಗಣ ಸಂಧಿ | ಜಗನ್ನಾಥವಿಠಲ | Pitrugana Sandhi | Jagannatha Dasaru | Harikathamruthasara

ಗೌರಿ ಆರತಿ ಹಾಡು | ಗೌರಿ ದೇವಿಗೆ ಸಖಿ | ಶ್ಯಾಮಸುಂದರ | Gouri Arati Song | Gouri Devige| Shyamasundara

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru