ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ದೇವರ ದೇವನೆ ಕಾಯೋ ದೇವಕಿ | ಹಯವದನ | Devara Devane Kaayo | Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ದೇವರ ದೇವನೆ ಕಾಯೋ ದೇವಕೀನಂದನೆ ಕಾಯೊ
ಜೀವರಾಶಿಗಳಿಗೆ ಸಂಜೀವನ ದೇವನೆ ಕಾಯೊ || ಪ ||

ಮಕರಿಗೆ ಕೈಸಿಕ್ಕಿ ಮಾನಭಂಗಗೊಂಡ ದೀನ
ಪ್ರಕೃತಿ ಬಂಧನದಿಂದ ಪಾಡುಬಡುತ್ತಿದ್ದೆನಯ್ಯ || ೧ ||

ಕಾಮವೆಂಬ ಕಡುವೈರಿ ಕಂಡಕಂಡ ಕಡೆಗೆನ್ನ
ಸೀಮೆಯೊಳು ಸುಳಿವಂತೆ ಶ್ರೀಧರ ಮಾಡಿದ ನೋಡು || ೨ ||

ಶ್ರೀಹಯವದನ ನೀನು ಶ್ರಿತಜನ ಕಾಮಧೇನು
ಮಹಂತನೆಂಬುದ ಕೇಳಿ ಮೆಚ್ಚಿ ಬಂದೆನಯ್ಯ ನಿನ್ನ || ೩ ||

dEvara dEvane kaayO dEvakInaMdane kaayo
jIvaraashigaLige saMjIvana dEvane kaayo || pa ||

makarige kaisikki maanabhaMgagoMDa dIna
prakRuti baMdhanadiMda paaDubaDuttiddenayya || 1 ||

kaamaveMba kaDuvairi kaMDakaMDa kaDegenna
sImeyoLu suLivaMte shrIdhara maaDida nODu || 2 ||

shrIhayavadana nInu shritajana kaamadhEnu
mahaMtaneMbuda kELi mecci baMdenayya ninna || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru