ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕೊಡು ಬೇಗ ದಿವ್ಯಮತಿ | ಪುರಂದರವಿಠಲ | Kodu Bega Divyamati | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ಕೊಡು ಬೇಗ ದಿವ್ಯಮತಿ | ಸರಸ್ವತಿ | ಕೊಡು ಬೇಗ ದಿವ್ಯಮತಿ ||ಪ||

ಮೃಡಹರಿ ಹಯಮುಖರೊಡೆಯಳೆ ನಿನ್ನಯ 
ಅಡಿಗಳಿಗೆರಗುವೆ ಅಮ್ಮ ಬ್ರಹ್ಮನ ರಾಣಿ ||೧||

ಇಂದಿರಾ ರಮಣನ ಹಿರಿಯ ಸೊಸೆಯು ನೀನು | 
ಬಂದೆನ್ನ ವದನದಿ ನಿಂದು ನಾಮವ ನುಡಿಸೇ ||೨||

ಅಖಿಲ ವಿದ್ಯಾಭಿಮಾನಿ ಅಜನ ಪಟ್ಟದ ರಾಣಿ | 
ಸುಖವಿತ್ತು ಪಾಲಿಸೆ ಸುಜನ ಶಿರೋಮಣಿ ||೩||

ಪತಿತ ಪಾವನೆ ನೀನು ಗತಿಯೆಂದು ನಂಬಿದೆ | 
ವಿತತ ಪುರಂದರ ವಿಠಲನ ತೋರೆ  ||೪||

koDu bEga divyamati | sarasvati | 
koDu bEga divyamati ||pa||
 
mRuDahari hayamuKaroDeyaLe ninnaya 
aDigaLigeraguve amma brahmana rANi ||1||
 
iMdirA ramaNana hiriya soseyu nInu | 
baMdenna vadanadi niMdu nAmava nuDisE ||2||
 
aKila vidyABimAni ajana paTTada rANi | 
suKavittu pAlise sujana SirOmaNi ||3||
 
patita pAvane nInu gatiyeMdu naMbide | 
vitata puraMdara viThalana tOre ||4||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru