ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಒಂದು ಬಾರಿ ಸ್ಮರಣೆ ಸಾಲದೆ | ಹಯವದನ | Ondu Bari Smarane | Hayavadana


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಒಂದು ಬಾರಿ ಸ್ಮರಣೆ ಸಾಲದೆ ||ಪ|| 
ಆನಂದತೀರ್ಥರ ಪೂರ್ಣಪ್ರಜ್ಞರ, ಸರ್ವಜ್ಞರಾಯರ ಮಧ್ವರಾಯರ ||ಅಪ|| 

ಹಿಂದನೇಕ ಜನ್ಮಗಳಲಿ ನೊಂದು ಯೋನಿಯಲ್ಲಿ ಬಂದು || 
ಇಂದಿರೇಶ ಹರಿಯ ಪಾದವ ಹೊಂದಬೇಕೆಂಬುವರಿಗೆ ||೧|| 

ಪ್ರಕೃತಿ ಬಂಧದಲ್ಲಿ ಸಿಲುಕಿ, ಸಕಲ ವಿಷಯಗಳಲಿ ನೊಂದು || 
ಅಕಳಂಕ ಚರಿತ ಹರಿಯ ಪಾದ ಭಕುತಿ ಬೇಕೆಂಬುವರಿಗೆ ||೨|| 

ಆರುಮಂದಿ ವೈರಿಗಳನು ಸೇರಲೀಸದಂತೆ ಜರಿದು || 
ಧೀರನಾಗಿ ಹರಿಯ ಪಾದವ ಸೇರಬೇಕೆಂಬುವರಿಗೆ ||೩|| 

ಘೋರ ಸಂಸಾರಾಂಬುಧಿಗೆ ಪರಮ ಜ್ಞಾನವೆಂಬ || 
ವಾಡೆ ಏರಿ ಮೆಲ್ಲನೆ ಹರಿಯ ಪಾದ ಸೇರಬೇಕೆಂಬುವರಿಗೆ ||೪|| 

ಹೀನ ಬುದ್ಧಿಯಿಂದ ಶ್ರೀ ಹಯವದನನ ಜರಿದು || 
ತಾನು ಬದುಕಲರಿಯದಿರಲು ತೋರಿಕೊಟ್ಟ ಮಧ್ವಮುನಿಯ ||೫|| 

oMdu bAri smaraNe sAlade ||pa|| 
AnaMdatIrthara pUrNaprajnara, sarvajnarAyara madhvarAyara ||apa|| 
 
hiMdanEka janmagaLali noMdu yOniyalli baMdu || 
iMdirESa hariya pAdava hoMdabEkeMbuvarige ||1|| 
 
prakRuti baMdhadalli siluki, sakala viShayagaLali noMdu || 
akaLaMka carita hariya pAda Bakuti bEkeMbuvarige ||2|| 
 
ArumaMdi vairigaLanu sEralIsadaMte jaridu || 
dhIranAgi hariya pAdava sErabEkeMbuvarige ||3|| 
 
GOra saMsArAMbudhige parama jnAnaveMba || 
vADe Eri mellane hariya pAda sErabEkeMbuvarige ||4|| 
 
hIna buddhiyiMda SrI hayavadanana jaridu || 
tAnu badukalariyadiralu tOrikoTTa madhvamuniya ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru