ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರಂಗ ಕುಣಿದ ಮುದ್ದು | ಪ್ರಸನ್ನವೇಂಕಟ | Ranga Kunida | Prasanna Venkata


ಸಾಹಿತ್ಯ : ಶ್ರೀ ಪ್ರಸನ್ನ ವೇಂಕಟ ದಾಸರು 
Kruti: Sri Prasanna Venkata Dasaru


ರಂಗ ಕುಣಿದ ಮುದ್ದು ರಂಗ ಕುಣಿದ || ಪ ||

ರಂಗ ಕುಣಿದ ಗೋಪಿಕಂಗಳ ಮುಂದೆ
ಪೊಂಗೆಜ್ಜೆ ರವದೊಳು ಅಂಗಳದೊಳು || ಅಪ ||

ಗೆಳೆಯರೆಂದೆನಿಸುವ ಎಳೆಮಕ್ಕಳೊಡಗೂಡಿ
ಬಳುಕುತ ಬಾಗುತ ನಲಿನಲಿದಾಡಿ  
ಮೊಳೆವಲ್ಲು ಬಾಯಿಜೊಲ್ಲು ಗಿಳಿಸೊಲ್ಲಿನಿಂದಲಿ
ಕಳಕಳಿಸಿ ನಕ್ಕು ನಗುತ ಬಿದ್ದೆದ್ದು || ೧ ||

ಸುಳಿಗುರುಳು ಫಣೆಯಲಿ ಒಲಿದಾಡಲು
ಬಲರಾಮ ತಿದ್ದಿದರಳುತ ಅಳುಕುತ 
ಮಕ್ಕಳ ರತುನ ಶ್ರೀ ಚಿಕ್ಕಕೃಷ್ಣಯ್ಯನು
ಬೆಕ್ಕಿಗೆ ಬೆದರ್ಯೆವೆ ಇಕ್ಕದೆ ನೋಡಿ || ೨ ||

ಅರಳೆಲೆ ಮಾಗಾಯಿ ಬೆರಳ ರನ್ನುಂಗುರ
ಕಿರುಗೆಜ್ಜೆ ಭಾರೆಂದು ತರಳರಿಗಿತ್ತು 
ನಗುತತಿ ಮುದ್ದಿಸಿ ಬಿಗಿದಪ್ಪಲೆಶೋದೆಯ
ಮಗ ಪ್ರಸನ್ವೆಂಕಟೇಶ ಚಿಗಿದುಡಿಯಲ್ಲಿ || ೩ ||

raMga kuNida muddu raMga kuNida || pa ||

raMga kuNida gOpikaMgaLa muMde
poMgejje ravadoLu aMgaLadoLu || apa ||

geLeyareMdenisuva eLemakkaLoDagUDi
baLukuta bAguta nalinalidADi  
moLevallu bAyijollu giLisolliniMdali
kaLakaLisi nakku naguta biddeddu || 1 ||

suLiguruLu phaNeyali olidADalu
balarAma tiddidaraLuta aLukuta 
makkaLa ratuna SrI cikkakRuShNayyanu
bekkige bedaryeve ikkade nODi || 2 ||

araLele mAgAyi beraLa rannuMgura
kirugejje BAreMdu taraLarigittu 
nagutati muddisi bigidappaleSOdeya
maga prasanveMkaTESa cigiduDiyalli || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru