ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಶ್ರೀಕೇಶವ ಪಂಚರತ್ನ ಕೀರ್ತನೆ |ವಾದಿರಾಜರು| ಆರತಿಯನೆತ್ತಿದರೆ | Aaratiyanettidare | Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಶ್ರೀ ಕೇಶವ ಪಂಚರತ್ನ ಕೀರ್ತನೆ 

ಆರತಿಯನೆತ್ತಿದರೆ ಕೇಶವ ನಾರಾಯಣಗೆ || ಪ ||
ಶಾಶ್ವತವೀವ ಮಾಧವ 
ವಾಸವವಂದ್ಯ ಗೋವಿಂದಗಾರತಿಯನೆತ್ತಿದರೆ || ಅ.ಪ ||

ದ್ವಾಪರರಹಿತ ಶ್ರೀವಿಷ್ಣುವಿಗೆ ಅಪಾರ ಮಧುಸೂದನಗೆ 
ಪಾಪರಹಿತ ತ್ರಿವಿಕ್ರಮಗಾರತಿಯನೆತ್ತಿದರೆ || ೧ ||

ಸಾಧುಸೇವಿತ ವಾಮನಗೆ ಶ್ರೀಧರ ಹೃಷೀಕೇಶನಿಗೆ 
ಆದಿಮೂರುತಿ ಪದ್ಮನಾಭಗಾರತಿಯನೆತ್ತಿದರೆ || ೨ ||

ದಾಮ‌ಉದರದಾಲುಳ್ಳವಗೆ ಪ್ರೇಮದಿ ಸಂಕರ್ಷಣಗೆ 
ಕಾಮಿತಾರ್ಥವನೀವ ವಾಸುದೇವಗಾರತಿಯನೆತ್ತಿದರೆ || ೩ ||

ಘನಮಹಿಮ ಪ್ರದ್ಯುಮ್ನನಿಗೆ ಅನಿರುದ್ಧ ಪುರುಷೋತ್ತಮಗೆ 
ವಿನಯದಿಂದಲಿ ಅಧೋಕ್ಷಜಗಾರತಿಯನೆತ್ತಿದರೆ || ೪ ||

ನರಸಿಂಹರೂಪನಾದವಗೆ ವರದ ಮೂರುತಿ ಅಚ್ಯುತಗೆ 
ಅರಿಭಯಂಕರ ಜನಾರ್ದನಗಾರತಿಯನೆತ್ತಿದರೆ || ೫ ||

ಉಪೇಂದ್ರನೆಂದೆನಿಸಿಕೊಂಡವಗೆ ಅಪಾರಮಹಿಮ ಶ್ರೀಹರಿಗೆ 
ಗೋಪಾಲಮೂರುತಿ ಶ್ರೀಕೃಷ್ಣಗಾರತಿಯನೆತ್ತಿದರೆ || ೬ ||

ಚತುರವಿಂಶತಿ ಮೂರುತಿಗಳಾ ಅತಿಶಯ ಧವಳವ ಪಾಡೆ 
ಸತುಪುರುಷರಿಷ್ಟಾರ್ಥವೀವನು ಸಿರಿ ಹಯವದನ || ೭ ||

Sri Keshava Pancharatna Keerthane


Aratiyanettidare kESava nArAyaNage || pa ||
SASvatavIva mAdhava 
vAsavavaMdya gOviMdagAratiyanettidare || a.pa ||

dvaapararahita SrIviShNuvige apAra madhusUdanage 
pAparahita trivikramagAratiyanettidare || 1 ||

sAdhusEvita vAmanage SrIdhara hRuShIkESanige 
AdimUruti padmanABagAratiyanettidare || 2 ||

dAma^^udaradAluLLavage prEmadi saMkarShaNage 
kAmitArthavanIva vAsudEvagAratiyanettidare || 3 ||

Ganamahima pradyumnanige aniruddha puruShOttamage 
vinayadiMdali adhOkShajagAratiyanettidare || 4 ||

narasiMharUpanAdavage varada mUruti acyutage 
ariBayaMkara janArdanagAratiyanettidare || 5 ||

upEMdraneMdenisikoMDavage apAramahima SrIharige 
gOpAlamUruti SrIkRuShNagAratiyanettidare || 6 ||

caturaviMSati mUrutigaLA atiSaya dhavaLava pADe 
satupuruShariShTArthavIvanu siri hayavadana || 7 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru