ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾರೋ ಮುರಾರಿ | ಹಯವದನ | Baaro Murari | Hayavadana


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಬಾರೋ ಮುರಾರಿ ಬಾಲಕ ಶೌರಿ| 
ಸಾರ ವಿಚಾರಿ ಸಂತೋಷಕಾರಿ ||ಪ|| 

ಆಟ ಸಾಕೇಳೋ ಮೈಯಲ್ಲ ಧೂಳೋ| 
ಊಟ ಮಾಡೇಳೋ ಕೃಷ್ಣ ಕೃಪಾಳೋ ||೧|| 

ಅರುಣಾಬ್ಜ ಚರಣ ಮಂಜುಳಾಭರಣ| 
ಪರಮವಿತರಣ ಪನ್ನಗ ಶಯನ ||೨||

ಮನೆಗೆದ್ದು ಬಾರೋ ಕೊನೆಗೈಯ ತೋರೋ| 
ಚಿನುಮಯ ಬಾರೋ ನಗೆಮೊಗ ತೋರೋ ||೩||

ವೆಂಕಟರಮಣ ಸಂಕಟಹರಣ| 
ಕಿಂಕರಮರಗಣ ವಂದಿತ ಚರಣ ||೪||

ಅರವಿಂದ ನಯನ ಶರದೇಂದು ವದನ| 
ವರಯದು ಸದನ ಸಿರಿ ಹಯವದನ ||೫||

bArO murAri bAlaka Sauri| 
sAra vicAri saMtOShakAri ||pa|| 
 
ATa sAkELO maiyalla dhULO| 
UTa mADELO kRuShNa kRupALO ||1|| 
 
aruNAbja caraNa maMjuLABaraNa| 
paramavitaraNa pannaga Sayana ||2||
 
manegeddu bArO konegaiya tOrO| 
cinumaya bArO nagemoga tOrO ||3||
 
veMkaTaramaNa saMkaTaharaNa| 
kiMkaramaragaNa vaMdita caraNa ||4||
 
araviMda nayana SaradEMdu vadana| 
varayadu sadana siri hayavadana ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru