ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಲಿಂಗ ರಾಮಲಿಂಗ | ವಿಜಯ ವಿಠಲ | Linga Rama Linga | Vijaya Vittala


 
ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಲಿಂಗ ರಾಮಲಿಂಗ ಎನ್ನಂತರಂಗ || ಪ || 
ಮಂಗಳಾಂಗನೆ ಸರ್ವೋತ್ತುಂಗನೆ 
ಲಿಂಗ ಅಂತರಂಗ ರಾಮಲಿಂಗ ಎನ್ನಂತರಂಗ ||ಅಪ||   

ಮಂದಾಕಿನಿಧರಗೆ ಗಂಗಾಂಬುಮಜ್ಜನವೇ 
ಚಂದ್ರಮೌಳಿಗೆ ಗಂಧಕುಸುಮಾರ್ಪಣೆಯೇ || 
ಇಂದುರವಿ ನೇತ್ರನಿಗೆ ಕರ್ಪೂರದಾರತಿಯೇ 
ಕಂದರ್ಪಜಿತಗೆ ಮಿಗಿಲಾಪೇಕ್ಷೆಯೇ ||೧||

ಘನ ವಿದ್ಯಾತುರಗೆ ಮಂತ್ರ ಕಲಾಪವೇ, 
ಧನಪತಿಯ ಸಖಗೆ ಕೈಕಾಣಿಕೆಯೇ || 
ಮನೆ ರಜತಪರ್ವತಗೆ ಫಣಿಯ ಆಭರಣವೇ, 
ಮನೋ ನಿಯಾಮಕಗೆನ್ನ ಬಿನ್ನಹವೇ ||೨||   

ವೈರಾಗ್ಯ ನಿಧಿಗೆ ಈ ವಿಷಯ ಪದಾರ್ಥವೇ, 
ಗೌರಿಯ ರಮಣನಿಗೆ ಈ ಸ್ತೋತ್ರವೇ 
ವೀರ ರಾಘವ ವಿಜಯ ವಿಠಲನ ನಿಜ ಹಸ್ತ
ವಾರಿಜ ದಳದಿಂದ ಉದ್ಭವಿಸಿದ ||೩||

liMga rAmaliMga ennaMtaraMga || pa || 
maMgaLAMgane sarvOttuMgane 
liMga aMtaraMga rAmaliMga ennaMtaraMga ||apa||   

maMdAkinidharage gaMgAMbumajjanavE 
caMdramauLige gaMdhakusumArpaNeyE || 
iMduravi nEtranige karpUradAratiyE 
kaMdarpajitage migilApEkSheyE ||1||

Gana vidyAturage maMtra kalApavE, 
dhanapatiya saKage kaikANikeyE || 
mane rajataparvatage PaNiya ABaraNavE, 
manO niyAmakagenna binnahavE ||2||   

vairAgya nidhige I viShaya padaarthavE, 
gauriya ramaNanige I stOtravE 
vIra rAGava vijaya viThalana nija hasta
vArija daLadiMda udBavisida ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru