ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮಾಮಝ ಬಾಪುರೆ | ಪುರಂದರವಿಠಲ | Mamaja Bapure | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ಮಾಮಝ ಬಾಪುರೆ ಭಳಿರೆ ಹನುಮಂತ ||ಪ|| 
ರಾಮಪದ ಸೇವಿಪ ವೀರ ಹನುಮಂತ ||ಅಪ|| 

ಹುಟ್ಟುತಲೆ ಹೊನ್ನ ಕಚ್ಚುಟವ ಕುಂಡಲವೆರಸಿ 
ನಿಷ್ಠೆಯಲಿ ರಘುಪತಿಯ ಪಾದವನೆ ಕಂಡು || 
ದಿಟ್ಟ ಹರಿದಾಡಿ ಮನಮುಟ್ಟಿ ಪೂಜಿಸಲವನ 
ಪಟ್ಟಕನುವಾದ ಸಿರಿವಂತ ಹನುಮಂತ ||೧|| 

ಅಂಬರಕೆ ಪುಟನೆಗೆದು ಅಂಬುಧಿಯ ನೆರೆದಾಟಿ 
ಕುಂಭಿನಿಯ ಮಗಳಿಗೆ ಉಂಗುರವನಿತ್ತೆ || 
ಬೆಂಬಿಡದೆ ಲಂಕೆಯನು ಸಂಭ್ರಮದಿ ಸಖಗಿತ್ತೆ 
ಗಂಭೀರ ವೀರಾಧಿವೀರ ಹನುಮಂತ ||೨|| 

ಅತಿ ದುರುಳ ರಕ್ಕಸನು ರಥದ ಮೇಲಿರಲು 
ರಘುಪತಿಯ ಪಾದಚಾರಿಯಾಗಿ ನಿಂತಿರಲು 
ಪೃಥುವಿ ಗಗನಕೆ ಬೆಳೆದು ರಥವಾಗಿ ಒಡೆಯನಿಗೆ 
ಅತಿ ಭಯಂಕರ ಸತ್ವವಂತ ಹನುಮಂತ ||೩|| 

ಒಡೆಯ ಉಣಕರೆಯಲಂದಡಿಗಡಿಗೆ ಕೈ ಮುಗಿದು 
ದೃಢಭಕುತಿಯಿಂದ ಮೌನದಲಿ ಕುಳಿತು 
ಎಡೆಯ ಕೊಂಡೆದ್ದೋಡಿ ಗಗನದಲಿ 
ಸುರರಿಗೆ ಕೊಡುತ ಸವಿದುಂಡ ಗುಣವಂತ ಹನುಮಂತ ||೪|| 

ಪ್ರಥಮದಲಿ ಹನುಮಂತ ದ್ವಿತೀಯದಲಿ ಕಲಿಭೀಮ 
ತೃತೀಯದಲಿ ಗುರುಮಧ್ವ ಮುನಿಯೆನಿಸಿ 
ಪ್ರತಿಯಿಲ್ಲದಲೆ ಮೆರೆದೆ ಪುರಂದರ ವಿಠಲನ 
ಭಕ್ತ ನಿನಗಾರು ಸರಿ ವಿಜಯ ಹನುಮಂತ ||೫|| 

mAmaJa bApure BaLire hanumaMta ||pa|| 
rAmapada sEvipa vIra hanumaMta ||apa|| 
 
huTTutale honna kaccuTava kuMDalaverasi 
niShTheyali raGupatiya pAdavane kaMDu || 
diTTa haridADi manamuTTi pUjisalavana 
paTTakanuvAda sirivaMta hanumaMta ||1|| 
 
aMbarake puTanegedu aMbudhiya neredATi 
kuMBiniya magaLige uMguravanitte || 
beMbiDade laMkeyanu saMBramadi saKagitte 
gaMBIra vIrAdhivIra hanumaMta ||2|| 
 
ati duruLa rakkasanu rathada mEliralu 
raGupatiya pAdacAriyAgi niMtiralu 
pRuthuvi gaganake beLedu rathavAgi oDeyanige 
ati BayaMkara satvavaMta hanumaMta ||3|| 
 
oDeya uNakareyalaMdaDigaDige kai mugidu 
dRuDhaBakutiyiMda maunadali kuLitu 
eDeya koMDeddODi gaganadali 
surarige koDuta saviduMDa guNavaMta hanumaMta ||4|| 
 
prathamadali hanumaMta dvitIyadali kaliBIma 
tRutIyadali gurumadhva muniyenisi 
pratiyilladale merede puraMdara viThalana 
Bakta ninagAru sari vijaya hanumaMta ||5|| 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru