ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಿನ್ನನಗಲಿ ಪೋಗಲಾರೆವೋ | ವಿಜಯ ವಿಠಲ | Ninnanagali Pogalarevo | Vijaya Vithala


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ನಿನ್ನನಗಲಿ ಪೋಗಲಾರೆವೋ ನೀರಜಾಕ್ಷ | 
ನಿನ್ನ ಸೇರಿ ಸುಖಿಸಬಂದೆವೋ ||ಪ||

ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ | 
ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೋ ಕೃಷ್ಣ ||ಅಪ||   

ಐದುವದಕೆ ಶಕ್ಯವಲ್ಲದ ಅಪ್ರಮೇಯ ಆದಿಪುರುಷ ಅಮರ ಸನ್ನುತ | 
ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರಮರಾದರೇನು 
ನಿನ್ನ ಶರಣರಾದ ಮೇಲೆ ಬಿಡುವುದುಂಟೆ ||೧|| 

ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ ನಿಂದ್ಯವೆಂದು ಶಾಸ್ತ್ರ ಪೇಳ್ವುದು | 
ಎಂದಿಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ 
ಸಿಂಧುಶಯನ ಎಮ್ಮನ್ಯಾಕೆ ಇಂದು ಹೋಗಿರೆಂಬೆ ನೀನು ||೨||   

ಶಮದಮಾದಿ ಗುಣಗಳಿಂದಲಿ ಸಜ್ಜನರು ಕ್ರಮದಿ ನಿನ್ನ ಮೂರ್ತಿ ಮನದಲಿ | 
ಮಮತೆಯಿಂದ ಪೂಜಿಸುತ್ತಾಗಮಿಸುವರೋ ನಿನ್ನ ಪುರಕೆ ನಮಗೆ ಮಾತ್ರ 
ಪತಿಸುತಾದ್ಯ ರಮಿತ ಸುಖವ ಕೊಡುವರೇನೋ ||೩||   

ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ ಪಕ್ಷ ವಹಿಸಿದಂತೆ ನಮ್ಮನು | 
ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ ಲಕ್ಷ್ಮೀದೇವಿ 
ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ ||೪||   

ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ 
ತನುವು ಮನವು ನಿನಗೆ ಅರ್ಪಿಸಿ | 
ಜನನ ಮರಣದಿಂದ ಜನರು ದಣಿವರೇನೋ ಕಾಂತ 
ನಮ್ಮ ಮನಸಿನಂತೆ ಒಲಿದು ಸಲಹೋ ವನಜನಾಭ ವಿಜಯ ವಿಠಲ ||೫||

ninnanagali pOgalArevO nIrajAkSha | 
ninna sEri suKisabaMdevO ||pa||

mannisade mamateyiMda Binna nuDigaLADi namage | 
haNNu tOri kALakUTavannu koDuvarEnO kRuShNa ||apa||   

aiduvadake Sakyavallada apramEya AdipuruSha amara sannuta | 
SrIda namma kaiya biDade AdarisabEku paramarAdarEnu 
ninna SaraNarAda mEle biDuvuduMTe ||1|| 

baMdhuvargavannu biDuvudu strIyarige niMdyaveMdu SAstra pELvudu | 
eMdigeMdigemage nIne baMdhuveMdu baMdihevo 
siMdhuSayana emmanyAke iMdu hOgireMbe nInu ||2||   

SamadamAdi guNagaLiMdali sajjanaru kramadi ninna mUrti manadali | 
mamateyiMda pUjisuttAgamisuvarO ninna purake namage mAtra 
patisutAdya ramita suKava koDuvarEnO ||3||   

mOkSha icCeyiMda ninnanu Bajipa janarA pakSha vahisidaMte nammanu | 
rakShisade biDuvarE kaTAkShadiMda IkShisade lakShmIdEvi 
nimage bahaLApEkSheyiMda mOhisidaLe ||4||   

anaGa ninna nODi mOhisi aMtarAtma 
tanuvu manavu ninage arpisi | 
janana maraNadiMda janaru daNivarEnO kAMta 
namma manasinaMte olidu salahO vanajanABa vijaya viThala ||5||


Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru