ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನೀನ್ಯಾಕೋ ನಿನ್ನ ಹಂಗ್ಯಾಕೋ | ಪುರಂದರ ವಿಠಲ | Ninyako Ninna Hangyako | Purandara Vittala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ನೀನ್ಯಾಕೋ ನಿನ್ನ ಹಂಗ್ಯಾಕೋ |ಪ|| 
ನಿನ್ನ ನಾಮದ ಬಲವೊಂದಿದ್ದರೆ ಸಾಕೋ ||ಅಪ|| 

ಕರಿಮಕರಿಗೆ ಸಿಕ್ಕಿ ಮೊರೆಯಿಡುತ್ತಿರುವಾಗ || 
ಆದಿ ಮೂಲ ಎಂಬೋ ನಾಮವೇ ಕಾಯ್ತೋ ||೧|| 

ಬಾಲೆಯ ಸಭೆಯಲ್ಲಿ ಸೀರೆಯ ಸೆಳೆವಾಗ | 
ಕೃಷ್ಣ ಕೃಷ್ಣ ಎಂಬ ನಾಮವೇ ಕಾಯ್ತೋ ||೨|| 

ಯಮನ ದೂತರು ಬಂದು ಅಜಮಿಳನೆಳೆವಾಗ | 
ನಾರಾಯಣನೆಂಬೋ ನಾಮವೇ ಕಾಯ್ತೋ ||೩|| 

ಪ್ರಹ್ಲಾದನ ಪಿತ ಬಾಧಿಸುತ್ತಿರುವಾಗ | 
ನರಹರಿ ಎಂಬ ನಾಮವೇ ಕಾಯ್ತೋ ||೪|| 

ಆ ಮರ ಈ ಮರ ಧ್ಯಾನಿಸುತ್ತಿರುವಾಗ | 
ರಾಮ ರಾಮ ಎಂಬ ನಾಮವೇ ಕಾಯ್ತೋ ||೫|| 

ಹಸುಳೆ ಆ ಧ್ರುವರಾಯ ಅಡವಿಗೆ ಪೋಪಾಗ | 
ವಾಸುದೇವ ಎಂಬ ನಾಮವೇ ಕಾಯ್ತೋ ||೬|| 

ನಿನ್ನ ನಾಮಕೆ ಸರಿ ಕಾಣೆನೋ ಜಗದೊಳು | 
ಘನ್ನ ಮಹಿಮ ಸಿರಿ ಪುರಂದರ ವಿಠಲ ||೭|| 

nInyAkO ninna haMgyAkO |pa|| 
ninna nAmada balavoMdiddare sAkO ||apa|| 
 
karimakarige sikki moreyiDuttiruvAga || 
Adi mUla eMbO nAmavE kAytO ||1|| 
 
bAleya saBeyalli sIreya seLevAga | 
kRuShNa kRuShNa eMba nAmavE kAytO ||2|| 
 
yamana dUtaru baMdu ajamiLaneLevAga | 
nArAyaNaneMbO nAmavE kAytO ||3|| 
 
prahlAdana pita bAdhisuttiruvAga | 
narahari eMba nAmavE kAytO ||4|| 
 
A mara I mara dhyAnisuttiruvAga | 
rAma rAma eMba nAmavE kAytO ||5|| 
 
hasuLe A dhruvarAya aDavige pOpAga | 
vAsudEva eMba nAmavE kAytO ||6|| 
 
ninna nAmake sari kANenO jagadoLu | 
Ganna mahima siri puraMdara viThala ||7||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru