ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಪಾಲಿಸೇ ಎನ್ನ ಶ್ರೀ ಮಹಾಲಕ್ಷ್ಮೀ | ಪುರಂದರ ವಿಠಲ | Palise enna Sri Mahalakshmi | Purandara Vithala


 ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ಪಾಲಿಸೇ ಎನ್ನ ಶ್ರೀ ಮಹಾಲಕ್ಷ್ಮೀ | 
ಪಾಲಿಸೇ ಎನ್ನನು ಪಾಲಾಬ್ಧಿ ಸಂಜಾತೆ ||ಪ||

ಲಲಿತಾಂಗಿ ಶುಭೆ ದೇವೀ ಮಂಗಳೇ ದೇವಿ ||ಅಪ||

ವೇದಾಭಿಮಾನಿ ಸಾರಸಾಕ್ಷಿ ಶ್ರೀಧರ ರಮಣಿ |
ಕಾದುಕೋ ನಿನ್ನಯ ಪಾದ ಸೇವಕರನ್ನು  
ಆದಿಶಕ್ತಿ ಸರ್ವ ಆಧಾರೆ ಗುಣಪೂರ್ಣೆ ||೧||

ದಯದಿಂದ ನೋಡೇ ಭಜಿಪ ಭಕ್ತರಾ |
ಭಯ ದೂರ ನೀ ಮಾಡೇ || 
ದಯವ ಪಾಲಿಸೆ ಮಾತೆ ತ್ರೈಲೋಕ್ಯ ವಿಖ್ಯಾತೆ |
ಜಯದೇವಿ ಸುವ್ರತೆ ಹಯವದನನ ಪ್ರೀತೆ ||೨||

ನೀನಲ್ಲದನ್ಯ ರಕ್ಷಿಸುವರನು ಕಾಣೆ ನಾ ಮುನ್ನ 
ದಾನವಾಂತಕ ಸಿರಿ ಪುರಂದರ ವಿಠಲನ | 
ಧ್ಯಾನಿಪ ಭಕುತರ ಮಾನ ನಿನ್ನದು ತಾಯೇ ||೩||

pAlisE enna SrI mahaalakShmI | 
pAlisE ennanu pAlAbdhi saMjAte ||pa||

lalitAMgi SuBe dEvI maMgaLE dEvi ||apa||

vEdABimAni sArasAkShi SrIdhara ramaNi |
kAdukO ninnaya pAda sEvakarannu  
AdiSakti sarva AdhAre guNapUrNe ||1||

dayadiMda nODE Bajipa BaktarA |
Baya dUra nI mADE || 
dayava pAlise mAte trailOkya viKyAte |
jayadEvi suvrate hayavadanana prIte ||2||

nInalladanya rakShisuvaranu kANe nA munna 
dAnavAMtaka siri puraMdara viThalana | 
dhyAnipa Bakutara mAna ninnadu tAyE ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru