ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಸೋಮ ಶಿವ | ಜಗನ್ನಾಥ ವಿಠಲ | Soma Shiva | Jagannatha Vittala


 

ಸಾಹಿತ್ಯ : ಶ್ರೀ ಜಗನ್ನಾಥ ದಾಸರು (ಜಗನ್ನಾಥ ವಿಠಲ)
Kruti:Sri Jagannatha Dasaru (Jagannatha vittala)


ಸೋಮ ಶಿವ | ಶರ್ವ ಭವ ಶ್ರೀಕಂಠ ನಿನ್ನ ಪದ | 
ತಾಮರಸ ಯುಗ್ಮಗಳಿಗಾ ನಮಿಸುವೆ ||ಪ|| 

ಮೃತ್ಯುಂಜಯ ಮೃಗಾಂಕ ಕೃತ್ತಿವಾಸ ಕೃಪಾಳು | 
ವಿತ್ತ ಪತಿ ಸಖ ವಿನಾಯಕ ಜನಕ || 
ಭೃತ್ಯುವರ್ಗಕೆ ಪಾಪ ಮೃತ್ಯು ಪರಿಹರಿಸಿ |
ಸಂಪತ್ತು ಪಾಲಿಪುದು ನಿವೃತ್ತಿ ಸಂಗಮವಾಸ ||೧|| 

ಭೋಪತಿ ಧ್ವಜ ಘೋರ ಪಾಪ ಸಂಹರಣ | 
ಹರಿ ಪೋಪ ಲೋಪಮ ಕಂಠ ಹರ ಭೂಷಣ | 
ಶ್ರೀಪತಿ ಶ್ರೀನಾಭಿ ಭೂಪ ಸಂಭೂತನಯ |   
ನೀ ಪಾಲಿಸೆಮ್ಮನು ವಿರೂಪಾಕ್ಷ ಗುರುವೆ ||೨|| 

ಭಸಿತ ಭೂಷಿತ ಹರನೇ ತ್ರಿಶೂಲ ಗೈಯನೇ ಶಂಭೋ | 
ಪಿಸಲಯೋಪಮ ನವಿರ ಶಶಿಭೂಷಣ | 
ಅಸುರಾರಿ ಶ್ರೀ ಜಗನ್ನಾಥ ವಿಠಲನ ಪದ ಬಿಸಜ 
ಧ್ಯಾನವನೀಯು ಹಸನಾಗಿ ಕಾಯೋ ||೩|| 

sOma Siva | Sarva Bava SrIkaMTha ninna pada | 
tAmarasa yugmagaLigA namisuve ||pa|| 
 
mRutyuMjaya mRugAMka kRuttivAsa kRupALu | 
vitta pati saKa vinAyaka janaka || 
BRutyuvargake pApa mRutyu pariharisi | 
saMpattu pAlipudu nivRutti saMgamavAsa ||1|| 
 
BOpati dhvaja GOra pApa saMharaNa | 
hari pOpa lOpama kaMTha hara BUShaNa | 
SrIpati SrInABhi BUpa saMBUtanaya | 
nI pAlisemmanu virUpAkSha guruve ||2|| 
 
Basita BUShita haranE triSUla gaiyanE SaMBO | 
pisalayOpama navira SaSiBUShaNa | 
asurAri SrI jagannAtha viThalana pada bisaja 
dhyAnavanIyu hasanAgi kAyO ||3|| 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru