ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕಲ್ಯಾಣಂ ತುಳಸಿ | ಪುರಂದರ ವಿಠಲ | Tulasi Pooja | Kalyanam Tulasi


 

ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ಕಲ್ಯಾಣಂ ತುಳಸಿ ಕಲ್ಯಾಣಂ || ಪ || 
ಕಲ್ಯಾಣವೇ ನಮ್ಮ ಕೃಷ್ಣ ಶ್ರೀ ತುಳಸಿಗೆ 
ಬಲ್ಲಿದ ಶ್ರೀ ವಾಸುದೇವನಿಗೆ ||ಅಪ|| 

ಅಂಗಳದೊಳಗೆಲ್ಲಾ ತುಳಸಿಯ ವನ ಮಾಡಿ 
ಶೃಂಗಾರವ ಮಾಡಿ ಶೀಘ್ರದಿಂದ || 
ಕಂಗಳ ಪಾಪವ ಪರಿಹರಿಸುವ ಮುದ್ದು ರಂಗ 
ಬಂದಲ್ಲಿ ತಾ ನೆಲೆಸಿದನು ||೧|| 

ಮಿಂದು ಮಡಿಯನುಟ್ಟು ಸಂದೇಹವ ಬಿಟ್ಟು 
ತಂದ ಶ್ರೀ ಗಂಧಾಕ್ಷತೆಗಳಿಂದ || 
ಸಿಂಧು ಶಯನನ ವೃಂದಾವನದಿ ಪೂಜಿಸೆ 
ಕುಂದದ ಭಾಗ್ಯವ ಕೊಡುತಿಹಳು ||೨|| 

ಭಕ್ಷ್ಯ ಭೋಜ್ಯಂಗಳ ನೈವೇದ್ಯವನಿಟ್ಟು 
ಲಕ್ಷ ಬತ್ತಿಯ ದೀಪವ ಹಚ್ಚಿ || 
ಅಧೋಕ್ಷಜ ಸಹಿತ ವೃಂದಾವನ ಪೂಜಿಸೆ 
ಸಾಕ್ಷಾತ್ ಮೋಕ್ಷವ ಕೊಡುತಿಹಳು ||೩|| 

ಉತ್ಥಾನ ದ್ವಾದಶಿ ದಿವಸದಲಿ ಕೃಷ್ಣ 
ಉತ್ತಮ ತುಳಸಿಗೆ ವಿವಾಹವ || 
ಚಿತ್ತ ನಿರ್ಮಲರಾಗಿ ಮಾಡಿದವರಿಗೆ 
ಉತ್ತಮ ಗತಿ ಈವ ಪುರಂದರ ವಿಠಲ ||೪||

kalyANaM tuLasi kalyANaM || pa || 
kalyANavE namma kRuShNa SrI tuLasige 
ballida SrI vAsudEvanige ||apa|| 
 
aMgaLadoLagellA tuLasiya vana mADi 
SRuMgArava mADi SIGradiMda || 
kaMgaLa pApava pariharisuva muddu raMga 
baMdalli tA nelesidanu ||1|| 
 
miMdu maDiyanuTTu saMdEhava biTTu 
taMda SrI gaMdhAkShategaLiMda || 
siMdhu Sayanana vRuMdAvanadi pUjise 
kuMdada BAgyava koDutihaLu ||2|| 
 
BakShya BOjyaMgaLa naivEdyavaniTTu 
lakSha battiya dIpava hacci || 
adhOkShaja sahita vRuMdAvana pUjise 
sAkShAt mOkShava koDutihaLu ||3|| 
 
utthAna dvAdaSi divasadali kRuShNa 
uttama tuLasige vivAhava || 
chitta nirmalarAgi mADidavarige 
uttama gati Iva puraMdara viThala ||4||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru