ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ವೃಂದಾವನ ದೇವಿ ನಮೋ | ಪುರಂದರ ವಿಠಲ | Vrundavana Devi Namo | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ವೃಂದಾವನ ದೇವಿ ನಮೋ ನಮೋ | 
ಚೆಲ್ವ ಮಂದರಧರನ ಮನ ಪ್ರೀಯಳೇ ||ಪ|| 

ನಿನ್ನ ಸೇವಿಸಿ ಉದಕವನೆರೆಯಲು | 
ಮುನ್ನ ಮಾಡಿದ ಪಾಪ ಹೋಗುವುದು || 
ಎನ್ನ ಇಪ್ಪತ್ತೊಂದು ಕುಲದವರಿಗೆಲ್ಲ | 
ಉನ್ನತ ವೈಕುಂಠ ಪದವೀವಳೇ ||೧|| 

ಒಂದೊಂದು ದಳದಲ್ಲಿ ಒಂದೊಂದು ಮೂರುತಿ | 
ಸಂದಣಿಸುತಿದೆ ಬಿಲು ಗುಪಿತದಲಿ || 
ಬಂದು ಕುಂಕುಮ ಶಂಖ ಚಕ್ರ ಧರಿಸಿದರೆ | 
ತಂದೆ ನಾರಾಯಣ ಕರೆದೊಯ್ಯುವ ||೨|| 

ಹರಿಗೆ ಸಮರ್ಪಿಸಿದ ತುಳಸಿ ನಿರ್ಮಾಲ್ಯವ | 
ಕೊರಳೊಳು ಧರಿಸಿ ಕರ್ಣದೊಳಿಟ್ಟರೆ || 
ದುರಿತ ರಾಶಿಗಳೆಲ್ಲ ಅಂಜಿ ಓಡುತಲಿವೆ | 
ಹರಿ ತನ್ನವರೆಂದು ಕೈ ಪಿಡಿವ ||೩|| 

ಹತ್ತು ಪ್ರದಕ್ಷಿಣೆ ಹತ್ತು ವಂದನೆ ಮಾಡೆ | 
ಉತ್ತಮ ವೈಕುಂಠ ಪದವೀವಳೆ || 
ಭಕ್ತಿಯಿಂದಲೆ ಬಂದು ಕೈ ಮುಗಿದವರನ್ನು | 
ಕರ್ತೃ ನಾರಾಯಣ ಕರೆದೊಯ್ಯುವ ||೪|| 

ಆವಾವ ಪರಿಯಲ್ಲಿ ಸೇವೆಯ ಮಾಡಲು | 
ಪಾವನ ವೈಕುಂಠ ಪದವೀವಳೇ || 
ದೇವ ಶ್ರೀ ಪುರಂದರ ವಿಠಲರಾಯನ 
ದೇವಿ ನಿನ್ನ ಮುಟ್ಟಿ ತ್ರಾಹಿಯೆಂಬೆ ||೫|| 

vRuMdAvana dEvi namO namO | 
celva maMdaradharana mana prIyaLE ||pa|| 
 
ninna sEvisi udakavanereyalu | 
munna mADida pApa hOguvudu || 
enna ippattoMdu kuladavarigella | 
unnata vaikuMTha padavIvaLE ||1|| 
 
oMdoMdu daLadalli oMdoMdu mUruti | 
saMdaNisutide bilu gupitadali || 
baMdu kuMkuma SaMKa cakra dharisidare | 
taMde nArAyaNa karedoyyuva ||2|| 
 
harige samarpisida tuLasi nirmAlyava | 
koraLoLu dharisi karNadoLiTTare || 
durita rASigaLella aMji ODutalive | 
hari tannavareMdu kai piDiva ||3|| 
 
hattu pradakShiNe hattu vaMdane mADe | 
uttama vaikuMTha padavIvaLe || 
BaktiyiMdale baMdu kai mugidavarannu | 
kartRu nArAyaNa karedoyyuva ||4|| 
 
AvAva pariyalli sEveya mADalu | 
pAvana vaikuMTha padavIvaLE || 
dEva SrI puraMdara viThalarAyana 
dEvi ninna muTTi trAhiyeMbe ||5|| 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru