ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಡಂಭಕದ ಭಕುತಿಯನು | ಮೋಹನ ವಿಠಲ | Dambakada Bhakutiyanu | Mohana Vithala


 
ಸಾಹಿತ್ಯ : ಶ್ರೀ ಮೋಹನ ದಾಸರು (ಮೋಹನ ವಿಠಲ)
Kruti: Sri Mohana Dasaru (Mohana Vithala)


ಡಂಭಕದ ಭಕುತಿಯನು ಬಿಡು ಕಂಡ್ಯ ಮನವೇ || ಪ ||
ಅಂಬುಜಾಕ್ಷನು ಒಲಿಯ ಅನಂತ ಕಾಲಕ್ಕೂ || ಅಪ ||

ಬಹಿರ ಅಂಗಡಿ ಹೂಡಿ ಜನರ ವಂಚಿಸಿದರೆ
ಅಹಿಕ ಫಲವಲ್ಲದೆ ಮೋಕ್ಷವುಂಟೆ
ವಿಹಿತಾವಿಹಿತ ತಿಳಿದು ಸತ್ಕರ್ಮ ಕಿಂಚಿತ್ ಮಾಡೆ
ದಹಿಸುವುದು ಅಘ ರಾಶಿ ಅಹಿಶಾಯಿ ಒಲಿವ || ೧ ||

ವರವೈಷ್ಣವರು ಬಂದು ನಿಲ್ಲಲು ವಂದಿಸದಲೆ
ಹರಿಪೂಜೆ ಮಾಳ್ಪೆನೆಂದು ಕುಳಿತುಕೊಂಬೆ
ಅರಿಯದ ಊರೊಳಗೆ ಅಗಸರ ಮಾಲಿಯೇ 
ಹಿರಿಯ ಮುತ್ತೈದೆಯೆಂದು ಕರೆಸುವಂತೆ || ೨ ||

ಜಪವ ಮಾಡುವೆನೆಂದು ಮುಸುಕನಿಟ್ಟು ಕುಳಿತು
ತಪಿಸುವೆ ಒಳಗೆ ನೀ ಧನದಾಸೆಯಿಂದ
ಕುಪಿತ ಬುದ್ಧಿಯ ಬಿಟ್ಟು ಮೋಹನ್ನ ವಿಠಲನ್ನ
ಗುಪಿತ ಮಾರ್ಗದಿ ಭಜಿಸಿ ಸುಪಥವನುಸರಿಸೆ || ೩ ||

DaMbhakada bhakutiyanu biDu kaMDya manavE || pa ||
aMbujaakShanu oliya anaMta kaalakkU || apa ||

bahira aMgaDi hUDi janara vaMcisidare
ahika Palavallade mOkShavuMTe
vihitaavihita tiLidu satkarma kiMcit maaDe
dahisuvudu agha raashi ahishaayi oliva || 1 ||

varavaiShNavaru baMdu nillalu vaMdisadale
haripUje maaLpeneMdu kuLitukoMbe
ariyada UroLage agasara maaliyE 
hiriya muttaideyeMdu karesuvaMte || 2 ||

japava maaDuveneMdu musukaniTTu kuLitu
tapisuve oLage nI dhanadaaseyiMda
kupita buddhiya biTTu mOhanna viThalanna
gupita maargadi bhajisi supathavanusarise || 3 ||

Popular posts from this blog

ಹರಿಕಥಾಮೃತಸಾರ | ಪಿತೃಗಣ ಸಂಧಿ | ಜಗನ್ನಾಥವಿಠಲ | Pitrugana Sandhi | Jagannatha Dasaru | Harikathamruthasara

ಗೌರಿ ಆರತಿ ಹಾಡು | ಗೌರಿ ದೇವಿಗೆ ಸಖಿ | ಶ್ಯಾಮಸುಂದರ | Gouri Arati Song | Gouri Devige| Shyamasundara

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru