ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಧವಳ ಗಂಗೆಯ ಗಂಗಾಧರ | ಹಯವದನ | Dhavala Gangeya Ganga | Hayavadana


 

ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಧವಳ ಗಂಗೆಯ ಗಂಗಾಧರ ಮಹಾಲಿಂಗ ||ಪ||
ಮಾಧವನ ತೋರಿಸಯ್ಯ ಗುರು ಕುಲೋತ್ತುಂಗ ||ಅಪ||

ಅರ್ಚಿಸಿದವರಿಗಭೀಷ್ಟೆಯ ಕೊಡುವ 
ದುಶ್ಚರಿತರನ್ನೆಲ್ಲವ ದೂರದಲ್ಲಿಡುವ ||
ಹೆಚ್ಚಿನ ಅಘಗಳ ತರಿದು ಬಿಸಾಡುವ
ಅಚ್ಯುತಗಲ್ಲದ ಅಸುರರ ಬಡಿವ ||೧||

ಮಾರನ್ನ ಗೆಲಿದ ಮನೋಹರ ಮೂರ್ತಿ 
ಸಾರ ಸಜ್ಜನರಿಗೆ ಸುರಚಕ್ರವರ್ತಿ ||
ಧಾರುಣಿಯೊಳಗೆ ತುಂಬಿದೆ ನಿಮ್ಮ ಕೀರ್ತಿ
ಮುರಾರಿಯ ತೋರಿಸಯ್ಯ ನಿನಗೆ ಶರಣಾರ್ಥಿ ||೨||

ಚೆನ್ನ ಪ್ರಸನ್ನ ಶ್ರೀ ಹಯವದನನ್ನ 
ಅನುದಿನ ನೆನೆವಂತೆ ಮಾಡೋ ನೀ ಎನ್ನ ||
ಅನ್ಯರನರಿಯೆನು ಗುರುವೆಂಬೆ ನಿನ್ನ
ಇನ್ನಾದರೂ ಹರಿಯ ತೋರೋ ಮುಕ್ಕಣ್ಣ ||೩||

dhavaLa gaMgeya gaMgAdhara mahAliMga ||pa||
mAdhavana tOrisayya guru kulOttuMga ||apa||

arcisidavarigabhIShTeya koDuva 
duScaritarannellava dUradalliDuva ||
heccina aGagaLa taridu bisADuva
acyutagallada asurara baDiva ||1||

mAranna gelida manOhara mUrti 
sAra sajjanarige suracakravarti ||
dhAruNiyoLage tuMbide nimma kIrti
murAriya tOrisayya ninage SaraNArthi ||2||

chenna prasanna SrI hayavadananna 
anudina nenevaMte mADO nI enna ||
anyaranariyenu guruveMbe ninna
innAdarU hariya tOrO mukkaNNa ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru