ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾರಯ್ಯ ವೇಂಕಟರಮಣ | ಪುರಂದರ ವಿಠಲ | Baarayya Venkataramana | Purandara Vithala


 

ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ಬಾರಯ್ಯ ವೇಂಕಟರಮಣ | ಭಕ್ತರ ನಿಧಿಯೆ ||ಪ||

ತೋರೋ ನಿನ್ನ ದಯ ತೋಯಜಾಂಬಕನೆ ||ಅಪ||

ವೇದಗೋಚರ ಬಾರೋ | ಆದಿ ಕಚ್ಚಪ ಬಾರೋ
ಮೋದ ಸೂಕರ ಬಾರೋ ಸದಯ ನರಸಿಂಹ ಬಾರೋ ||೧||

ವಾಮನ ಭಾರ್ಗವ ಬಾರೋ | ರಾಮಕೃಷ್ಣನೇ ಬಾರೋ
ಪ್ರೇಮದ ಬುದ್ಧನೆ ಬಾರೋ | ಸ್ವಾಮಿ ಕಲ್ಕಿ ನೀ ಬಾರೋ ||೨||

ಅರವಿಂದನಾಭ ಬಾರೋ | ಸುರರ ಪ್ರಭುವೆ ಬಾರೋ |
ಪುರುಹೂತ ವಂದ್ಯ ಬಾರೋ ಪುರಂದರ ವಿಠಲ ಬಾರೋ ||೩||

bArayya vEMkaTaramaNa | Baktara nidhiye ||pa||

tOrO ninna daya tOyajAMbakane ||apa||

vEdagOcara bArO | Adi kaccapa bArO
mOda sUkara bArO sadaya narasiMha bArO ||1||

vAmana BArgava bArO | rAmakRuShNanE bArO
prEmada buddhane bArO | svAmi kalki nI bArO ||2||

araviMdanABa bArO | surara praBuve bArO |
puruhUta vaMdya bArO puraMdara viThala bArO ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru