ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಂದನೇನೆ ರಂಗ ಬಂದನೇನೆ | ಪುರಂದರ ವಿಠಲ | Bandanene Ranga | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ಬಂದನೇನೆ ರಂಗ ಬಂದನೇನೆ |ಪ|
ಎನ್ನ ತಂದೆ ಬಾಲಕೃಷ್ಣ ನವನೀತ ಚೋರ |ಅಪ|

ಘಿಲು ಘಿಲು ಘಿಲುರೆಂಬ ಪೊನ್ನೊಂದುಗೆ ಗೆಜ್ಜೆ| 
ಹೊಳೆ ಹೊಳೆ ಹೊಳೆಯುವ ಪಾದವ ನೂರುತ|
ನಲಿ ನಲಿದಾಡುವ ಉಂಗುರ ಅರಳೆಲೆ| 
ಥಳ ಥಳ ಥಳ ಥಳ ಹೊಳೆಯುತ ಶ್ರೀಕೃಷ್ಣಾ |೧|

ಕಿಣಿ ಕಿಣಿ ಕಿಣಿರೆಂಬ ಕರದ ಕಂಕಣ ಬಳೆ| 
ಝಣ ಝಣ ಝಣರೆಂಬ ನಡುವಿನ ಘಂಟೆ|
ಢಣ ಢಣ ಢಣರೆಂಬ ಪಾದದ ತೊಡರಿನ| 
ಮಿಣಿ ಮಿಣಿ ಮಿಣಿ ಕುಣಿದಾಡುತ ಶ್ರೀಕೃಷ್ಣಾ|೨|

ಹಿಡಿ ಹಿಡಿ ಹಿಡಿ ಎಂದು ಪುರಂದರ ವಿಠಲನ 
ದುಡು ದುಡು ದುಡು ದುಡುನೇ ಓಡುತಾ|
ನಡೆ ನಡೆ ನಡೆಯೆಂದು ಮೆಲ್ಲನೆ ಪಿಡಿಯಲು| 
ಬಿಡಿ ಬಿಡಿ ಬಿಡಿ ಬಿಡಿ ದಮ್ಮಯ್ಯ ಎನ್ನುತ |೩|

baMdanEne raMga baMdanEne |pa|
enna taMde bAlakRuShNa navanIta cOra |apa|
 
Gilu Gilu GilureMba ponnoMduge gejje| 
hoLe hoLe hoLeyuva pAdava nUruta|
nali nalidADuva uMgura araLele| 
thaLa thaLa thaLa thaLa hoLeyuta SrIkRuShNA |1|
 
kiNi kiNi kiNireMba karada kaMkaNa baLe| 
JaNa JaNa JaNareMba naDuvina GaMTe|
DhaNa DhaNa DhaNareMba pAdada toDarina| 
miNi miNi miNi kuNidADuta SrIkRuShNA|2|
 
hiDi hiDi hiDi eMdu puraMdara viThalana 
duDu duDu duDu duDunE ODutA|
naDe naDe naDeyeMdu mellane piDiyalu| 
biDi biDi biDi biDi dammayya ennuta |3|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru