ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

Bhajane - Dasara Hadugalu ಭಜನೆ - ದಾಸರ ಹಾಡುಗಳು

 'ಕಲಿಯುಗದಲಿ ಹರಿ ನಾಮವ ನೆನೆದರೆ, ಕುಲಕೋಟಿಗಳುದ್ಧರಿಸುವವು' . ಇದು ದಾಸ ಶ್ರೇಷ್ಠರಾದ ಶ್ರೀ ಪುರಂದರದಾಸರ ವಾಣಿ. ಸಕಲ ವೇದ ಶಾಸ್ತ್ರಗಳ ಸಾರವನ್ನು ಸರಳ ಕನ್ನಡದಲ್ಲಿ, ಅನೇಕ ದಾಸರ ಮತ್ತು ಅಪರೋಕ್ಷ ಜ್ಞಾನಿಗಳ ಬಾಯಿಂದ ನುಡಿಸಿದ ಭಗವಂತನ ಕರುಣೆಯನ್ನು ವರ್ಣಿಸಲಸದಳ. ಇಂತಹ ದಾಸರ ಕೀರ್ತನೆಗಳನ್ನು ಪಾಮರರಾದ ನಾವು ತಿಳಿದು ಹಾಡುವುದರಿಂದ, ಶ್ರೀ ಭಗವಂತನನ್ನು ಅರ್ಚಿಸಿದಂತೆ. ರಾಗ, ತಾಳ, ಭಾವದಿಂದ ಭಗವಂತನನ್ನು ವರ್ಣಿಸುವ ಭಜನೆಗಳನ್ನು ಅನುಭವಿಸಿ ಹಾಡುವಾಗ ಆಗುವ ಆನಂದ ಅಪಾರ.


Bhajane - Dasara Hadugalu ಭಜನೆ - ದಾಸರ ಹಾಡುಗಳು  YouTube ಚಾನೆಲ್ನಲ್ಲಿ ದಾಸರ ಹಾಡುಗಳನ್ನು ಭಜನಾ ರೂಪದಲ್ಲಿ ಪ್ರಸ್ತುತಿಸಲಾಗಿದೆ


ಈ Blog post ಗಳಲ್ಲಿ ಅದರ ಸಾಹಿತ್ಯವನ್ನು ಇರಿಸಿದೆ. 


ದಾಸ ಸಾಹಿತ್ಯದ ಬಗ್ಗೆ ಹೆಚ್ಚಿನ ವಿವರಣೆಗಾಗಿ Wikipedia ಓದಿ

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru