ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಹಣ್ಣು ಬಂದಿದೆ ಕೊಳ್ಳಿರೋ | ಪುರಂದರವಿಠಲ | Hannu Bandide Kolliro | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ಹಣ್ಣು ಬಂದಿದೆ ಕೊಳ್ಳಿರೋ ನೀವೀಗ ||ಪ||
ಬಾಲಕೃಷ್ಣನೆಂಬ ಚೆನ್ನಾದ ಬಾಳೆಯ ||ಅಪ||

ಹವ್ಯ ಕವ್ಯದ ಹಣ್ಣು ಸವಿವ ಸಕ್ಕರೆ ಹಣ್ಣು |
ಭವರೋಗಗಳೆಲ್ಲ ಕಳೆವ ಹಣ್ಣು ||
ನವನೀತ ಚೋರನೆಂಬ ಜವನ ಅಂಜಿಪ ಹಣ್ಣು |
ಅವನಿಯೋಳು ಶ್ರೀ ರಾಮನೆಂಬೋ ಹಣ್ಣು ||೧||

ಕೊಳೆತು ಹೋಗುವುದಲ್ಲ ಹುಳಿತು ಹೋಗುವುದಲ್ಲ |
ಕಳೆದು ಬಿಸಾಡಿಸಿ ಕೊಳ್ಳುವುದಲ್ಲ ||
ಅಳತೆ ಕೊಂಬುವುದಲ್ಲ ಗಿಳಿ ಕಚ್ಚಿ ತಿಂಬೋದಲ್ಲ |
ಒಳಿತಾದ ಹರಿಯೆಂಬೊ ಮಾವಿನ ಹಣ್ಣು ||೨||

ಕೆಟ್ಟು ನಾರುವುದಲ್ಲ ಬಿತ್ತಿ ಬೆಳೆಯೋದಲ್ಲ |
ಕಷ್ಟದಿ ಹಣ ಕೊಟ್ಟು ಕೊಂಬುವುದಲ್ಲ |
ಸೃಷ್ಟಿಯೊಳಗೆ ನಮ್ಮ ಪುರಂದರ ವಿಠಲನ |
ಕೃಷ್ಣರಾಯನೆಂಬೊ ಶ್ರೇಷ್ಠವಾದ ಹಣ್ಣು ||೩||

haNNu baMdide koLLirO nIvIga ||pa||
bAlakRuShNaneMba chennAda bALeya ||apa||
 
havya kavyada haNNu saviva sakkare haNNu |
BavarOgagaLella kaLeva haNNu ||
navanIta cOraneMba javana aMjipa haNNu |
avaniyOLu SrI rAmaneMbO haNNu ||1||
 
koLetu hOguvudalla huLitu hOguvudalla |
kaLedu bisADisi koLLuvudalla ||
aLate koMbuvudalla giLi kacci tiMbOdalla |
oLitAda hariyeMbo mAvina haNNu ||2||
 
keTTu nAruvudalla bitti beLeyOdalla |
kaShTadi haNa koTTu koMbuvudalla |
sRuShTiyoLage namma puraMdara viThalana |
kRuShNarAyaneMbo SrEShThavAda haNNu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru