ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕುದುರೆ ಬಂದಿದೆ ಚೆಲ್ವ | ಹಯವದನ | Kudure Bandide Chelva | Vadirajaru


 

ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಕುದುರೆ ಬಂದಿದೆ ಚೆಲ್ವ ಕುದುರೆ ಬಂದಿದೆ |ಪ|
ವಾದಿರಾಜರಿಜಗೊಲಿದು ಬಂದು ಸ್ವಾದಿ ಪುರದಲ್ಲಿ ನಿಂದ |ಅಪ|

ಮುಂಗಾಲು ಕೆದರಿ ಕುಣಿವ ಕುದುರೆ ಹಿಂಗಾಲಲಸುರರ ಒದೆವ ಕುದುರೆ|
ರಂಗನೆಂದರೆ ಸಲಹೋ ಕುದುರೆ ತುಂಗ ಹಯವದನ ಕುದುರೆ |೧|

ಹಲ್ಲಣದೊಳಗೆ ನಿಲ್ಲದು ಕುದುರೆ| ಬೆಲ್ಲ ಕಡಲೆ ಮೆಲ್ವ ಕುದುರೆ|
ಪುಲ್ಲಭವನಿಗೊಲಿದ ಕುದುರೆ| ಚೆಲ್ವ ಹಯವದನ ಕುದುರೆ |೨|

ಸುತ್ತಮುತ್ತಲು ಆಡುವ ಕುದುರೆ ಮತ್ತವಾದಿಯ ಗೆಲ್ವ ಕುದುರೆ|
ಶತ್ರುಗಳೆಲ್ಲರ ಬಡಿವ ಕುದುರೆ| ತತ್ತ್ವ ಹಯವದನ ಕುದುರೆ |೩|

kudure baMdide celva kudure baMdide |pa|
vAdirAjarijagolidu baMdu svAdi puradalli niMda |apa|
 
muMgAlu kedari kuNiva kudure hiMgAlalasurara odeva kudure|
raMganeMdare salahO kudure tuMga hayavadana kudure |1|
 
hallaNadoLage nilladu kudure| bella kaDale melva kudure|
pullaBavanigolida kudure| celva hayavadana kudure |2|
 
suttamuttalu ADuva kudure mattavAdiya gelva kudure|
SatrugaLellara baDiva kudure| tattva hayavadana kudure |3|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru