ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಲೋಕಭರಿತನೋ ರಂಗ | ಹಯವದನ | Lokabharitano Ranga | Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಲೋಕಭರಿತನೋ ರಂಗ ಅ | ನೇಕ ಚರಿತನೋ ||ಪ||
ಕಾಕು ಜನರ ತರಿದು ತನ್ನೇಕಾಂತ ಭಕ್ತರ ಪೊರೆವ ಕೃಷ್ಣ ||ಅಪ||

ರಾಜಸೂಯ ಯಾಗದಲ್ಲಿ ರಾಜರಾಜರಿರಲು ಧರ್ಮ |
ರಾಜಸುತನು ಈತನೆ ಸಭಾ ಪೂಜೆಗರ್ಹನೆನಿಸಿದಾತ ||೧||

ಮಿಕ್ಕ ನೃಪರ ಜರೆದು ಅಮಿತ ವಿಕ್ರಮದಲಿ ಮೆರೆವ ಹರಿಯ |
ತಕ್ಕ ರಮಣನೆಂದು ರುಕ್ಮಿಣಿ ಉಕ್ಕಿ ಮನದಿ ಒಲಿದಳಾಗ ||೨||

ಜ್ಞಾನ ಶೂನ್ಯನಾಗಿ ಸೊಕ್ಕಿ ತಾನೆ ವಾಸುದೇವ ಎನಲು |
ಹೀನ ಪೌಂಡ್ರಕನ ಶಿರವ ಜಾಣರಾಯ ತರಿದನಾಗ ||೩||

ಉತ್ತರೆಯ ಗರ್ಭದಲ್ಲಿ ಸುತ್ತಿ ಸುಳಿವ ಅಸ್ತ್ರವನ್ನು |
ಒತ್ತಿ ಚಕ್ರದಿಂದ ನಿಜ ಭಕ್ತ ಪರೀಕ್ಷಿತನ ಕಾಯ್ದ ||೪||

ತನ್ನ ಸೇವಕ ಜನರ ಪೊರೆದು ಉನ್ನತುಡುಪಿಯಲ್ಲಿ ನಿಂದು
ಘನ್ನ ಮಹಿಮೆಯಿಂದ ಮೆರೆವ ಪ್ರಸನ್ನ ಹಯವದನ ಕೃಷ್ಣ ||೫||

lOkaBaritanO raMga a | nEka caritanO ||pa||
kAku janara taridu tannEkAMta Baktara poreva kRuShNa ||apa||
 
rAjasUya yAgadalli rAjarAjariralu dharma |
rAjasutanu Itane saBA pUjegarhanenisidAta ||1||
 
mikka nRupara jaredu amita vikramadali mereva hariya |
takka ramaNaneMdu rukmiNi ukki manadi olidaLAga ||2||
 
j~jAna SUnyanAgi sokki tAne vAsudEva enalu |
hIna pauMDrakana Sirava jANarAya taridanAga ||3||
 
uttareya garBadalli sutti suLiva astravannu |
otti cakradiMda nija Bakta parIkShitana kAyda ||4||
 
tanna sEvaka janara poredu unnatuDupiyalli niMdu
Ganna mahimeyiMda mereva prasanna hayavadana kRuShNa ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru