ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನೆನೆವೆನು ಅನುದಿನ | ಪುರಂದರವಿಠಲ | Nenevenu Anudina | Purandara vithala


 

ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ನೆನೆವೆನು ಅನುದಿನ ನಿಮ್ಮ ಮಹಿಮೆಯನು ಮಧ್ವರಾಯ
ಸನಕಾದಿ ಮುನಿವಂದ್ಯ ಸೇವಿತ ಪಾದಾಬ್ಜ ಮಧ್ವರಾಯ ||ಪ||

ಕಲಿಮಲದಿಂ ಜ್ಞಾನ ಕಲುಷಿತವಾಗಲು ಮಧ್ವರಾಯ
ನಳಿನಾಕ್ಷನಾಜ್ಞದಿ ಇಳೆಯೊಳಗುದಿಸಿದ್ಯೊ ಮಧ್ವರಾಯ ||೧||

ಗೋವಿತ್ತ ವಿಪ್ರಗೆ ನಿರುತ ಮೋಕ್ಷವನಿತ್ತೆ ಮಧ್ವರಾಯ
ಜೀವೇಶರೊಂದೆಂಬ ಮತವ ಭೇದಿಸಿದೆ ಮಧ್ವರಾಯ ||೨||

ಸೂತ್ರಾರ್ಥಗಳನೆಲ್ಲ ವೇತೃಗಳಿಗೆ ತಿಳಿಸಿ ಮಧ್ವರಾಯ
ಶಾಸ್ತ್ರದ ತಾತ್ಪರ್ಯ ಪ್ರಕರಣ ರಚಿಸಿದೆ ಮಧ್ವರಾಯ ||೩||

ಸುಜನರ ಹೃದಯದಿ ಸೇರಿದ್ದ ತಮಸಿಗೆ ಮಧ್ವರಾಯ
ನಿಜಜ್ಞಾನ ರವಿಯಂತೆ ಕಿರಣವ ಹರಡಿದೆ ಮಧ್ವರಾಯ ||೪||

ವ್ಯಾಸದೇವರಿಗಭಿವಂದಿಸಿ ಬದರಿಲಿ ಮಧ್ವರಾಯ
ಶ್ರೀಶ ಪುರಂದರ ವಿಠಲನ ದಾಸನಾದೆ ಮಧ್ವರಾಯ ||೫||

nenevenu anudina nimma mahimeyanu madhwaraaya
sanakaadi munivaMdya sEvita paadaabja madhwaraaya ||pa||

kalimaladiM j~jaana kaluShitavaagalu madhwaraaya
naLinaakShanaaj~jadi iLeyoLagudisidyo madhwaraaya ||1||

gOvitta viprage niruta mOkShavanitte madhwaraaya
jeevEsharoMdeMba matava bhEdiside madhwaraaya ||2||

sUtraarthagaLanella vEtRugaLige tiLisi madhwaraaya
shaastrada taatparya prakaraNa rachiside madhwaraaya ||3||

sujanara hRudayadi sEridda tamasige madhwaraaya
nijaj~jaana raviyaMte kiraNava haraDide madhwaraaya ||4||

vyaasadEvarigabhivaMdisi badarili madhwaraaya
shrIsha puraMdara viThalana daasanaade madhwaraaya ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru