ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಿಲ್ಲಬೇಕಯ್ಯ ಕೃಷ್ಣಯ್ಯ | ಪುರಂದರ ವಿಠಲ | Nillabekayya Krishnayya | Purandara Vithala


 

ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)

Kruti: Sri Purandara dasaru (Purandara vittala)


ನಿಲ್ಲಬೇಕಯ್ಯ ಕೃಷ್ಣಯ್ಯ ನೀ ||ಪ||

ನಿಲ್ಲಬೇಕಯ್ಯ ಮಲ್ಲ ಮರ್ದನ ಸಿರಿ ವಲ್ಲಭ 
ಎನ್ನ ಹೃದಯದಲಿ ಸಂತತ ನೀ |ಅಪ||

ಸುಪ್ಪಾಣಿ ಮುತ್ತಿಟ್ಟು ನೋಡುವೆ | ಸದಾ |
ಚಪ್ಪಾಳೆ ತಟ್ಟಿ ನಾ ಪಾಡುವೆ ||
ಅಪ್ಪಾ ಶ್ರೀ ಕೃಷ್ಣನೇ ಎತ್ತಿ ಮುದ್ದಿಸಿಕೊಂಬೆ |
ಸರ್ಪಶಯನ ಕೃಪೆ ಮಾಡೆಂದು ಬೇಡುವೆ ||೧||

ಚಂದದ ಹಾಸಿಗೆ ಹಾಸುವೆ | ಪುನಗು |
ಗಂಧ ಕಸ್ತೂರಿಯ ಪೂಸುವೆ ||
ಅಂದದಿ ಮುತ್ತಿನ ಹಾರ ಹಾಕುವೆಯಾ | ಆ |
ನಂದದಿಂದಲಿ ನಿನ್ನ ಎತ್ತಿ ಮುದ್ದಿಸಿಕೊಂಬೆ ||೨||

ನೀಲದ ಕಿರೀಟ ನಿನಗಿಡುವೆ | ಬಲು |
ಬಾಲಲೀಲೆಗಳನ್ನು ಪಾಡುವೆ ||
ಮಾಲೋಲ ಪುರಂದರ ವಿಠಲ ರಾಯನೆ |
ನಿಲು ಎನ್ನ ಮನದಲಿ ಒಂದೇ ಘಳಿಗೆ ||೩||

nillabEkayya kRuShNayya nI ||pa||
 
nillabEkayya malla mardana siri vallaBa 
enna hRudayadali saMtata nI |apa||
 
suppANi muttiTTu nODuve | sadA |
cappALe taTTi nA pADuve ||
appA SrI kRuShNanE etti muddisikoMbe |
sarpaSayana kRupe mADeMdu bEDuve ||1||
 
caMdada hAsige hAsuve | punagu |
gaMdha kastUriya pUsuve ||
aMdadi muttina hAra hAkuveyA | A |
naMdadiMdali ninna etti muddisikoMbe ||2||
 
nIlada kirITa ninagiDuve | balu |
bAlalIlegaLannu pADuve ||
mAlOla puraMdara viThala rAyane |
nilu enna manadali oMdE GaLige ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru