ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಿನ್ನನಾಶ್ರಯಿಸುವೆನು | ಪುರಂದರ ವಿಠಲ | Ninnanashrayisuvenu | Purandara Vithala


 

ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ) Kruti: Sri Purandara dasaru (Purandara vittala)


ನಿನ್ನನಾಶ್ರಯಿಸುವೆನು ನಿಗಮ ಗೋಚರ ನಿತ್ಯ | ಬೆನ್ನ ಬಿಡದೆ ಕಾಯೋ ಮನದಿಷ್ಟವೀಯೋ ||ಪ|| ಕುಂದಣದ ಆಶ್ರಯವು ನವರತ್ನಗಳಿಗೆಲ್ಲ | ಚಂದಿರನ ಆಶ್ರಯವು ಚಕೋರಗೆ || ಕಂದರ್ಪನಾಶ್ರಯವು ವಸಂತ ಕಾಲಕೆ | ಗೋವಿಂದನಾಶ್ರಯವು ಮರಣ ಕಾಲದೊಳು ||೧|| ಹಣ್ಣುಳ್ಳ ಮರಗಳು ಪಕ್ಷಿಗಳಿಗಾಶ್ರಯವು | ಪುಣ್ಯನದಿಗಳು ಋಷಿಗಳಿಗೆ ಆಶ್ರಯವು || ಕಣ್ಣಿಲ್ಲದಾತಗೆ ಕೈಗೋಲಿನಾಶ್ರಯವು | ತನ್ನಿಷ್ಟಪಡೆದವಗೆ ನಿನ್ನ ಆಶ್ರಯವು ||೨|| ಪತಿವ್ರತೆ ವನಿತೆಗೆ ಪತಿಯೊಂದೆ ಆಶ್ರಯವು | ಯತಿಗಳಿಗೆ ಶೃತಿಪ್ರಣವ ಮಂತ್ರದಾಶ್ರಯವು | ಮತಿವಂತನಿಗೆ ಹರಿಸ್ತುತಿಗಳೇ ಆಶ್ರಯವು | ಹಿತವಾದ ಪುರಂದರ ವಿಠಲನಾಶ್ರಯವು ||೩|| ninnanASrayisuvenu nigama gOcara nitya | benna biDade kAyO manadiShTavIyO ||pa|| kuMdaNada ASrayavu navaratnagaLigella | caMdirana ASrayavu cakOrage || kaMdarpanASrayavu vasaMta kAlake | gOviMdanASrayavu maraNa kAladoLu ||1|| haNNuLLa maragaLu pakShigaLigASrayavu | puNyanadigaLu RuShigaLige ASrayavu || kaNNilladAtage kaigOlinASrayavu | tanniShTapaDedavage ninna ASrayavu ||2|| pativrate vanitege patiyoMde ASrayavu | yatigaLige SRutipraNava maMtradASrayavu | mativaMtanige haristutigaLE ASrayavu | hitavAda puraMdara viThalanASrayavu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru